ಬಂಧನ
(ಸಾಂದರ್ಭಿಕ ಚಿತ್ರ)
ನವದೆಹಲಿ: ಬಾಂಗ್ಲಾದೇಶದ ಪ್ರಜೆಗಳ ಅಕ್ರಮ ವಲಸೆಯಲ್ಲಿ ತೊಡಗಿದ್ದ ಜಾಲವೊಂದನ್ನು ಪತ್ತೆ ಹಚ್ಚಿರುವ ದೆಹಲಿ ಪೊಲೀಸರು, 11 ಜನರನ್ನು ಮಂಗಳವಾರ ಬಂಧಿಸಿದ್ದಾರೆ.
ಬಂಧಿತರಲ್ಲಿ ನಾಲ್ವರು ಬಾಂಗ್ಲಾ ದೇಶಿಯರಿದ್ದು, ಉಳಿದವರು ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದರು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಸಂಗಮ್ ವಿಹಾರ್‌ನಲ್ಲಿ ಅ.21ರಂದು ನಡೆದ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರನ್ನು ಪತ್ತೆ ಹಚ್ಚಿದಾಗ, ಈ ಜಾಲ ಕಾರ್ಯಾಚರಣೆ ನಡೆಸುತ್ತಿರುವುದು ಗೊತ್ತಾಗಿದೆ ಎಂದು ಪೊಲೀಸ್ ಉಪ ಆಯುಕ್ತ (ದಕ್ಷಿಣ) ಅಂಕಿತ್ ಚೌಹಾಣ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.