ಕಾಲುವೆಗೆ ಬಿದ್ದಿರುವ ಕಾರು
-ಪಿಟಿಐ ಚಿತ್ರ
ಗೊಂಡಾ: ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಎಸ್‌ಯುವಿ ಕಾರು ಸರಾಯು ಕಾಲುವೆಗೆ ಉರುಳಿ ಬಿದ್ದ ಪರಿಣಾಮ 11 ಜನ ಮೃತಪಟ್ಟಿದ್ದಾರೆ.
ಚಾಲಕ ಸೇರಿದಂತೆ ಕಾರಿನಲ್ಲಿ ಒಟ್ಟು 15 ಮಂದಿ ಪ್ರಯಾಣಿಸುತ್ತಿದ್ದರು. ಗಾಯಗೊಂಡಿರುವ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
'ಸಿಹಗಾಂವ್ ಗ್ರಾಮದಿಂದ ಖಾರ್ಗುಪುರದ ಪೃಥ್ವಿನಾಥ ದೇವಾಲಯಕ್ಕೆ ತೆರಳುತ್ತಿದ್ದಾಗ ಕಾರು ಬೆಲ್ವಾ ಬಹುತಾದಲ್ಲಿ ಕಾಲುವೆಗೆ ಬಿದ್ದಿದೆ. ಆರು ಮಹಿಳೆಯರು, ಇಬ್ಬರು ಪುರುಷರು ಮತ್ತು ಮೂರು ಮಕ್ಕಳು ಮೃತಪಟ್ಟಿದ್ದಾರೆ' ಎಂದು ಪೊಲೀಸರು ಹೇಳಿದ್ದಾರೆ.
ಮೃತರ ಕುಟುಂಬಸ್ಥರಿಗೆ ತಲಾ ₹2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹50 ಸಾವಿರ ಪರಿಹಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. ಮೃತರ ಕುಟುಂಬಸ್ಥರಿಗೆ ತಲಾ ₹5 ಲಕ್ಷ ನೀಡುವುದಾಗಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೂ ಪ್ರಕಟಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.