ಮಳೆಯಿಂದಾಗಿ ದ್ವಾರಕಾದಲ್ಲಿ ನೀರು ನಿಂತಿರುವುದು
ಪಿಟಿಐ ಚಿತ್ರ
ಲಖನೌ: ಉತ್ತರ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ಒಂದೇ ದಿನ 11 ಮಂದಿ ಮೃತಪಟ್ಟಿದ್ದಾರೆ ಎಂದು ವಿಪತ್ತು ಪರಿಹಾರ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.
ಐವರು ನೀರಿನಲ್ಲಿ ಮುಳುಗಿ ಮೃತಪಟ್ಟರೆ, ಐವರು ಸಿಡಿಲು ಬಡಿದು ಹಾಗೂ ಇನ್ನೊಬ್ಬರು ಹಾವು ಕಡಿದು ಮೃತಪಟ್ಟಿದ್ದಾರೆ.
ಗೋರಖ್‌ಪುರ, ಗೊಂಡಾ ಸೇರಿ ಹಲವು ಜಿಲ್ಲೆಗಳಲ್ಲಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ವಿಪತ್ತು ಪರಿಹಾರ ಇಲಾಖೆ ಸ್ಥಳೀಯ ಆಡಳಿತವನ್ನು ಎಚ್ಚರಿಸಿದೆ.
ಪ್ರತಿಕೂಲ ಹವಾಮಾನದಿಂದ ಉಂಟಾಗುವ ಅಪಾಯವನ್ನು ತಪ್ಪಿಸಲು ಸ್ಥಳೀಯ ಆಡಳಿತದೊಂದಿಗೆ ಸಮನ್ವಯ ಸಾಧಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದ 75 ಜಿಲ್ಲೆಗಳ ಪೈಕಿ 19 ಜಿಲ್ಲೆಗಳಲ್ಲಿ ಅಧಿಕ ಮಳೆ ದಾಖಲಾಗಿದ್ದು, ಹಮೀರ್‌ಪುರದಲ್ಲಿ ಗರಿಷ್ಠ 163.2 ಮಿಲಿ ಮೀಟರ್ ಮಳೆಯಾಗಿದೆ. ಸರಾಸರಿ ರಾಜ್ಯದಲ್ಲಿ ಒಂದು ದಿನ ಅವಧಿಯಲ್ಲಿ 7.3 ಮಿಲಿ ಮೀಟರ್ ಮಳೆಯಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.