ADVERTISEMENT

ಎಲ್ಗಾರ್‌ ಪ್ರಕರಣ: ಹನಿ ಬಾಬು ಜಾಮೀನು ಅರ್ಜಿ ವಜಾ

ಪಿಟಿಐ
Published 19 ಸೆಪ್ಟೆಂಬರ್ 2022, 11:34 IST
Last Updated 19 ಸೆಪ್ಟೆಂಬರ್ 2022, 11:34 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ:ಎಲ್ಗಾರ್‌ ಪರಿಷತ್‌ ಪ್ರಕರಣದ ಆರೋಪಿ, ದೆಹಲಿ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ಹನಿ ಬಾಬು ಅವರ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್‌ ಸೋಮವಾರ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಎನ್‌.ಎಂ.ಜಾಮ್ದರ್‌ ಮತ್ತು ಎನ್‌.ಆರ್‌.ಬೋರ್ಕರ್‌ ಅವರಿದ್ದ ವಿಭಾಗೀಯ ಪೀಠ, ‘ಜಾಮೀನು ನಿರಾಕರಿಸಿದ್ದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಬಾಬು ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ’ ಎಂದು ತಿಳಿಸಿದೆ.

ಎಲ್ಗಾರ್‌ ಪರಿಷತ್ –ಮಾವೊ ನಡುವೆ ಸಂಪರ್ಕ ಇದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ 2020 ಜುಲೈನಲ್ಲಿ ಬಾಬು ಅವರನ್ನು ಬಂಧಿಸಲಾಗಿದ್ದು, ಸದ್ಯ ಅವರನ್ನು ನವ ಮುಂಬೈನ ತಲೋಜಾ ಕಾರಾಗೃಹದಲ್ಲಿಡಲಾಗಿದೆ.

ADVERTISEMENT

2017ರ ಡಿಸೆಂಬರ್‌ 31ರಂದು ಪುಣೆಯಲ್ಲಿ ನಡೆದ ಎಲ್ಗಾರ್‌ ಪರಿಷತ್‌ ಸಭೆಯಲ್ಲಿ ಹೋರಾಟಗಾರರೊಬ್ಬರು ಮಾಡಿದ ಭಾಷಣವು ಮರುದಿನವೇ ನಡೆದ ಭೀಮಾ ಕೋರೆಗಾಂವ್‌ ಹಿಂಸಾಚಾರಕ್ಕೆ ಪ್ರಚೋದನೆ ನೀಡಿತ್ತು ಎಂದು ಪೊಲೀಸರು ಆರೋಪಿಸಿದ್ದಾರೆ. ಹಿಂಸಾಚಾರದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.