ನರೇಂದ್ರ ಮೋದಿ
(ಪಿಟಿಐ ಚಿತ್ರ)
ನವದೆಹಲಿ: 'ಮನ್ ಕಿ ಬಾತ್' ರೆಡಿಯೊ ಕಾರ್ಯಕ್ರಮದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಸೇರಿದಂತೆ ಅನೇಕ ವಿಷಯಗಳ ಕುರಿತು ಪ್ರಸ್ತಾಪಿಸಿದ್ದಾರೆ.
'ಅಂದಿನ ಸರ್ಕಾರವು ಜನರ ಮೇಲೆ ಹೇರಿದ ದೌರ್ಜನ್ಯವನ್ನು ಪ್ರಧಾನಿ ಮೋದಿ ಖಂಡಿಸಿದ್ದಾರೆ. ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಡಿದವರನ್ನು ಯಾವಾಗಲೂ ಸ್ಮರಿಸಲಾಗುವುದು. ಇದರಿಂದ ಸಂವಿಧಾನವನ್ನು ಬಲಿಷ್ಠವಾಗಿಡಲು ಹಾಗೂ ಜನರು ಎಚ್ಚರವಾಗಿರಲು ಪ್ರೇರೇಪಿಸಲಿದೆ' ಎಂದು ಹೇಳಿದ್ದಾರೆ.
'ತುರ್ತು ಪರಿಸ್ಥಿತಿ ಹೇರಿದವರು ಸಂವಿಧಾನದ ಹತ್ಯೆ ಮಾಡಿದ್ದಲ್ಲದೆ ನ್ಯಾಯಾಂಗವನ್ನು ಕೈಗೊಂಬೆಯಾಗಿ ಮಾಡಿಕೊಂಡಿದ್ದರು' ಎಂದು ಮೋದಿ ಆರೋಪಿಸಿದ್ದಾರೆ.
ತುರ್ತು ಪರಿಸ್ಥಿತಿಯಲ್ಲಿ ಅವಧಿಯಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷ ಅಥವಾ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಹೆಸರುಗಳನ್ನು ಉಲ್ಲೇಖಿಸಿದಯೇ ಪ್ರಧಾನಿ ವಾಗ್ದಾಳಿ ನಡೆಸಿದ್ದಾರೆ.
'1975ರಿಂದ 1977ರ ವರೆಗಿನ 21 ತಿಂಗಳ ತುರ್ತು ಪರಿಸ್ಥಿತಿಯ ಅವಧಿಯಲ್ಲಿ ಜನರಿಗೆ ತೊಂದರೆ ಕೊಡಲಾಯಿತು. ಇದನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ನಿರಂತರ ಹೋರಾಟದ ಬಳಿಕ ಅಂತಿಮ ಗೆಲುವು ಜನರದ್ದಾಯಿತು. ಅಂತಿಮವಾಗಿ ತುರ್ತು ಪರಿಸ್ಥಿತಿಯನ್ನು ತೆಗೆದುಹಾಕಲಾಯಿತು' ಎಂದು ಹೇಳಿದ್ದಾರೆ.
ಪ್ರಧಾನಿ ತಮ್ಮ ಭಾಷಣದಲ್ಲಿ ತುರ್ತು ಪರಿಸ್ಥಿತಿಯಲ್ಲಿ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರ ಹೇಳಿಕೆಯ ಆಡಿಯೊವನ್ನು ಪ್ರಸಾರ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.