ADVERTISEMENT

ಪುಲ್ವಾಮಾದಲ್ಲಿ ಭದ್ರತಾ ಪಡೆ–ಉಗ್ರರ ನಡುವೆ ಗುಂಡಿನ ಚಕಮಕಿ; ಒಬ್ಬ ಉಗ್ರ ಬಲಿ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2021, 4:54 IST
Last Updated 15 ಡಿಸೆಂಬರ್ 2021, 4:54 IST
ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು–ಸಂಗ್ರಹ ಚಿತ್ರ
ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು–ಸಂಗ್ರಹ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಬುಧವಾರ ಗುಂಡಿನ ಚಕಮಕಿ ನಡೆಯುತ್ತಿದೆ. ಎನ್‌ಕೌಂಟರ್‌ನಲ್ಲಿ ಗುರುತು ಪತ್ತೆಯಾಗದ ಉಗ್ರನೊಬ್ಬ ಬಲಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪುಲ್ವಾಮಾದ ರಾಜ್‌ಪೊರಾ ಪ್ರದೇಶದಲ್ಲಿ ಮಂಗಳವಾರ ತಡ ರಾತ್ರಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಕೈಗೊಂಡಿವೆ. ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಶೋಧ ಕಾರ್ಯಾಚರಣೆಯು ಎನ್‌ಕೌಂಟರ್‌ ಆಗಿ ಬದಲಾಯಿತು ಎಂದು ಪೊಲೀಸ್‌ ವಕ್ತಾರರು ಹೇಳಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರ ಹತನಾಗಿದ್ದು, ಆತನ ಗುರುತು ಮತ್ತು ಜೊತೆಯಾಗಿರುವ ಸಂಘಟನೆಯ ಕುರಿತು ಮಾಹಿತಿ ಕಲೆ ಹಾಕುವ ಪ್ರಯತ್ನ ನಡೆದಿದೆ.

ADVERTISEMENT

ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ಮತ್ತು ಭಾರತೀಯ ಸೇನೆ ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸಿತ್ತು. ಉಗ್ರರು ಇರುವ ಸ್ಥಳಕ್ಕೆ ಸಮೀಪಿಸುತ್ತಿದ್ದಂತೆ ಅವರಿಂದ ಗುಂಡಿನ ದಾಳಿ ಶುರುವಾಗಿದ್ದು, ಭದ್ರತಾ ಪಡೆಗಳು ಪ್ರತ್ಯುತ್ತರ ನೀಡಿವೆ. ಎನ್‌ಕೌಂಟರ್‌ ಕಾರ್ಯಾಚರಣೆ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.