ADVERTISEMENT

ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ, ಯೋಧ ಹುತಾತ್ಮ

ಪಿಟಿಐ
Published 26 ಅಕ್ಟೋಬರ್ 2018, 5:00 IST
Last Updated 26 ಅಕ್ಟೋಬರ್ 2018, 5:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಇಲ್ಲಿನ ಬಾರಾಮುಲ್ಲಾ ಜಿಲ್ಲೆಯ ಸೋಪೋರ್‌ ಪ್ರದೇಶದಲ್ಲಿ ಭದ್ರತಾ ಪಡೆ ಯೋಧರು ಶುಕ್ರವಾರನಡೆಸಿದ ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ‌‌ಹತ್ಯೆಯಾಗಿದ್ದಾರೆ. ಈ ವೇಳೆ ಒಬ್ಬ ಯೋಧ ಹುತಾತ್ಮರಾಗಿದ್ದಾರೆ.

ಉಗ್ರರು ಅಡಗಿರುವ ಖಚಿತ ಮಾಹಿತಿ ಆಧರಿಸಿ ಭದ್ರತಾಪಡೆಗಳು ಉತ್ತರ ಕಾಶ್ಮೀರ ಜಿಲ್ಲೆಯ ಫಜಲ್‌ಪುರದ ಬಳಿ ಶೋಧ ಕಾರ್ಯಾಚರಣೆ ಆರಂಭಿಸಿದವು ಎಂದು ಪೊಲೀಸರು ತಿಳಿಸಿದ್ದಾರೆ.

ಶೋಧಕಾರ್ಯಾಚರಣೆ ವೇಳೆ ಉಗ್ರರು, ಭದ್ರತಾಪಡೆ ಸಿಬ್ಬಂದಿಯ ಮೇಲೆ ಗುಂಡಿನ ದಾಳಿ ನಡೆಸಲು ಮುಂದಾದರು. ಈ ಸಂದರ್ಭದಲ್ಲಿ ಎನ್‌ಕೌಂಟರ್‌ ನಡೆಸಲಾಗಿದೆ. ಸದ್ಯ ಕಾರ್ಯಾಚರಣೆ ಮುಂದುವರಿದಿದೆ ಎಂದೂ ಮಾಹಿತಿ ನೀಡಿದರು.

ADVERTISEMENT

Jammu and Kashmir: Two terrorists neutralised and one soldier killed in action in an ongoing encounter in Sopore. pic.twitter.com/dGGiJe9eAX

*

*

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.