ADVERTISEMENT

ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಒಬ್ಬ ಉಗ್ರನ ಹತ್ಯೆ

ಏಜೆನ್ಸೀಸ್
Published 13 ಅಕ್ಟೋಬರ್ 2018, 2:56 IST
Last Updated 13 ಅಕ್ಟೋಬರ್ 2018, 2:56 IST
ಚಿತ್ರ ಕೃಪೆ – ಎಎನ್‌ಐ
ಚಿತ್ರ ಕೃಪೆ – ಎಎನ್‌ಐ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಬಳಿ ಶನಿವಾರ ಬೆಳಿಗ್ಗೆ ಭದ್ರತಾಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ. ಉಗ್ರನಿಂದ ಶಸ್ತ್ರಾಸ್ತ್ರ ಮತ್ತು ಯುದ್ಧ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ನಸುಕಿನ ವೇಳೆ ಗುಂಡಿನ ಚಕಮಕಿ ಆರಂಭವಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ದೊರೆಯಬೇಕಿದೆ ಎಂದುಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಗುರುವಾರ ಭದ್ರತಾ ಪಡೆಗಳು ನಡೆಸಿದ್ದ ಎನ್‌ಕೌಂಟರ್‌ನಲ್ಲಿಹಿಜ್ಬುಲ್‌ ಮುಜಾಹಿದೀನ್‌ ಉಗ್ರ ಮನನ್‌ ಬಷೀರ್‌ ವಾನಿ ಮೃತಪಟ್ಟಿದ್ದ. ನಂತರ ಪ್ರತ್ಯೇಕತಾವಾದಿಗಳು ನಡೆಸಿದ್ದ ಪ್ರತಿಭಟನೆಯಿಂದಾಗಿ ರಾಜ್ಯದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತ್ತು.

ADVERTISEMENT

ಈ ಮಧ್ಯೆ,ಮನನ್‌ ಬಷೀರ್‌ ವಾನಿ ಸ್ಮರಣಾರ್ಥ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವೊಂದರಲ್ಲಿದೇಶ ವಿರೋಧಿ ಘೋಷಣೆಗಳನ್ನು ಕೂಗಿದ ಆರೋಪದಲ್ಲಿ ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದ ಇಬ್ಬರು ಸಂಶೋಧನಾ ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.