ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹಳೆಯ ಬರ್ಜುಲಾ ಪ್ರಾಂತ್ಯದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆಸೋಮವಾರ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ತಿಳಿಸಿದರು.
ಖಚಿತ ಮಾಹಿತಿ ಆಧರಿಸಿ ಹಳೆಯ ಬರ್ಜುಲಾ ಪ್ರಾಂತ್ಯದಲ್ಲಿ ಬೆಳಿಗ್ಗೆ 7.45ಕ್ಕೆ ಶೋಧ ಕಾರ್ಯಾಚರಣೆ ಕೈಗೊಳ್ಳಲಾಯಿತು. ಈ ವೇಳೆ ಉಗ್ರರು ಗುಂಡಿನ ದಾಳಿಯನ್ನು ನಡೆಸಿದ್ದು, ಭದ್ರತಾ ಪಡೆ ಸಿಬ್ಬಂದಿಯೂಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ್ದಾರೆ.
‘ಕಾರ್ಯಾಚರಣೆ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ಲಭ್ಯವಿಲ್ಲ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.