ಬಾಲಾಘಾಟ್: ಮಧ್ಯ ಪ್ರದೇಶದ ಬಾಲಾಘಾಟ್ ಜಿಲ್ಲೆಯಲ್ಲಿ ನಕ್ಸಲ್ ವಿರೋಧಿ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರು ಮೃತಪಟ್ಟಿದ್ದಾರೆ. ಈ ನಾಲ್ವರನ್ನು ಹುಡುಕಿ ಕೊಟ್ಟವರಿಗೆ ₹56 ಲಕ್ಷ ಬಹುಮಾನ ನೀಡುವುದಾಗಿ ಘೋಷಣೆ ಮಾಡಲಾಗಿತ್ತು.
ಇವರು ಸುಮಾರು 100 ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದರು.
‘ಈ ನಾಲ್ವರಲ್ಲಿ ಮೂವರು ಮಹಿಳೆಯರಿದ್ದರು. ಪಡೆಗಳು ಶನಿವಾರ ಕಾರ್ಯಾಚರಣೆ ನಡೆಸಿದ್ದವು. ಇವರು ನಿಷೇಧಿತ ಜಿಆರ್‌ಬಿ ನಕ್ಸಲ ಸಂಘಟನೆಯ ಪ್ರಾದೇಶಿಕ ಸಮಿತಿಯ ಸದಸ್ಯರಾಗಿದ್ದರು. ನಕ್ಸಲರು ಇದ್ದ ಸ್ಥಳದಿಂದ ಹಲವಾರು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಭಾನುವಾರ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.