ADVERTISEMENT

ಜಮ್ಮು–ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರು ಸಾವು

ಪಿಟಿಐ
Published 24 ಆಗಸ್ಟ್ 2021, 9:41 IST
Last Updated 24 ಆಗಸ್ಟ್ 2021, 9:41 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ‘ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಮಂಗಳವಾರ ತಿಳಿಸಿದರು.

‘ಸೊಪೋರ್‌ನ ಪೇಟಸೀರಾದಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಸೋಮವಾರ ತಡರಾತ್ರಿ ಶೋಧ ಕಾರ್ಯಾಚರಣೆ ನಡೆಸಿವೆ. ಆದರೆ ಮಂಗಳವಾರ ಮುಂಜಾನೆ ವೇಳೆ ಉಗ್ರರು ಮೊದಲು ಗುಂಡಿನ ದಾಳಿ ನಡೆಸಿದರು. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ನಡೆಸಿದ ದಾಳಿಯಲ್ಲಿ ಮೂವರು ಉಗ್ರರು ಹತರಾದರು’ ಎಂದು ಅವರು ಮಾಹಿತಿ ನೀಡಿದರು.

‘ಮೃತ ಉಗ್ರರು ಯಾವ ಸಂಘಟನೆಗೆ ಸೇರಿದವರು ಎಂಬುದರ ಬಗ್ಗೆ ಪತ್ತೆ ಹಚ್ಚಲಾಗುತ್ತಿದೆ’ ಎಂದು ಅವರು ತಿಳಿಸಿದರು.

ADVERTISEMENT

‘ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಭದ್ರತಾ ಪಡೆಗಳ ಸಹಾಯದಿಂದ ಕಾಶ್ಮೀರ ವಿಭಾಗದಲ್ಲಿ ಈ ವರ್ಷ 100 ಕ್ಕೂ ಹೆಚ್ಚು ಉಗ್ರರನ್ನು ಹೊಡೆದುರುಳಿಸಲಾಗಿದೆ’ ಎಂದು ಕಾಶ್ಮೀರದ ಐಜಿಪಿ ವಿಜಯ್‌ ಕುಮಾರ್ ಅವರು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.