ADVERTISEMENT

ಜಮ್ಮು-ಕಾಶ್ಮೀರ: ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರ ಹತ್ಯೆ

ಪಿಟಿಐ
Published 26 ಸೆಪ್ಟೆಂಬರ್ 2021, 7:35 IST
Last Updated 26 ಸೆಪ್ಟೆಂಬರ್ 2021, 7:35 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಬಂಡಿಪೊರ ಜಿಲ್ಲೆಯಲ್ಲಿ ಭಾನುವಾರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ.

ಖಚಿತ ಮಾಹಿತಿ ಆಧರಿಸಿ ಇಲ್ಲಿನ ವಾಟ್ರಿನಾ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದು ಶೋಧ ಕಾರ್ಯ ಕೈಗೊಂಡಿದ್ದವು. ಅಡಗಿಕೊಂಡಿದ್ದ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದವು.

‘ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಶಸ್ತ್ರಾಸ್ತ್ರ, ಸ್ಫೋಟಕಗಳು ಸೇರಿದಂತೆ ಅಪಾರ ಪ್ರಮಾಣದ ಪರಿಕರಗಳನ್ನು ವಶಕ್ಕೆ ಪಡೆಯಲಾಗಿದೆ. ಶೋಧ ಕಾರ್ಯ ಇನ್ನು ಪ್ರಗತಿಯಲ್ಲಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.