ADVERTISEMENT

ಜಮ್ಮು ಮತ್ತು ಕಾಶ್ಮೀರ: ಲಷ್ಕರ್‌–ಎ–ತಯಬಾ ಸಂಘಟನೆಯ ಉಗ್ರನ ಎನ್‌ಕೌಂಟರ್‌

ಪಿಟಿಐ
Published 5 ಜನವರಿ 2024, 10:50 IST
Last Updated 5 ಜನವರಿ 2024, 10:50 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ ಅಧಿಕಾರಿಗಳು ಲಷ್ಕರ್‌–ಎ–ತಯಬಾ ಸಂಘಟನೆಗೆ ಸೇರಿದ ಉಗ್ರನೊಬ್ಬನನ್ನು ಎನ್‌ಕೌಂಟರ್‌ ಮಾಡಿದ್ದಾರೆ.

ಹತನಾದ ಉಗ್ರನನ್ನು ಬಿಲಾಲ್‌ ಅಹಮದ್‌ ಭಟ್‌ ಎಂದು ಗುರುತಿಸಲಾಗಿದೆ. ಈತ 2017ರಲ್ಲಿ ಭಾರತದ ಸೇನಾ ಅಧಿಕಾರಿ ಉಮರ್‌ ಫಯಾಜ್‌ ಅವರನ್ನು ಅಪಹರಿಸಿ, ಕೊಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಶೋಪಿಯಾನ್‌ನ ಚೋಟಿಗಮ್‌ ಗ್ರಾಮದಲ್ಲಿ ಉಗ್ರರ ಚಟುವಟಿಕೆಯ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದರು. ಉಗ್ರರ ಉಪಸ್ಥಿತಿಯ ಬಗ್ಗೆ ಶಂಕೆಯಿರುವ ಜಾಗಕ್ಕೆ ತೆರಳುತ್ತಿದ್ದಂತೆ ಭದ್ರತಾ ಪಡೆ ಮೇಲೆ ಗುಂಡಿನ ದಾಳಿ ನಡೆದಿದೆ. ಅದಕ್ಕೆ ಸೇನೆ ಪ್ರತ್ಯುತ್ತರ ನೀಡಿದ್ದು, ಉಗ್ರನೊಬ್ಬ ಹತನಾಗಿದ್ದಾನೆ ಎಂದು ಸೇನಾ ವಕ್ತಾರರೊಬ್ಬರು ತಿಳಿಸಿದ್ದಾರೆ.

ADVERTISEMENT

ಉಗ್ರನ ಮೃತದೇಹವನ್ನು ಎನ್‌ಕೌಂಟರ್ ನಡೆದ ಸ್ಥಳದಿಂದ ವಶಕ್ಕೆ ಪಡೆಯಲಾಗಿದೆ. ಈತ ಹಲವು ಉಗ್ರ ದಾಳಿಗಳಲ್ಲಿ ಭಾಗಿಯಾಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.