ADVERTISEMENT

ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ: ಗುಂಡು ತಗುಲಿ ಮಹಿಳೆಗೆ ಗಾಯ

​ಪ್ರಜಾವಾಣಿ ವಾರ್ತೆ
Published 22 ಜೂನ್ 2018, 5:11 IST
Last Updated 22 ಜೂನ್ 2018, 5:11 IST
ರಕ್ಷಣಾ ಪಡೆ  (ಸಂಗ್ರಹ ಚಿತ್ರ)
ರಕ್ಷಣಾ ಪಡೆ (ಸಂಗ್ರಹ ಚಿತ್ರ)   

ಶ್ರೀನಗರ:ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆ ರಕ್ಷಣಾ ಪಡೆಗಳುಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಿವೆ. ಉಗ್ರರತ್ತ ಹಾರಿಸಿದ ಗುಂಡು ತಗುಲಿಓರ್ವ ಮಹಿಳೆಗೆ ಗಾಯವಾಗಿದೆ.

ಇಲ್ಲಿನ ಶ್ರೀಗುಫ್‍ವಾರ ಗ್ರಾಮದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಮೇರೆಗೆ ರಕ್ಷಣಾ ಪಡೆ ದಾಳಿ ನಡೆಸಿತ್ತು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಉಗ್ರರು ಅವಿತಿರುವ ಸುದ್ದಿ ತಿಳಿದ ಕ್ಷಣದಿಂದ ಈ ಜಿಲ್ಲೆಯಲ್ಲಿ ಅಂತರ್ಜಾಲ ಸಂಪರ್ಕ ಸ್ಥಗಿತಗೊಳಿಸಲಾಗಿದೆ.

ಭದ್ರತಾ ಸಿಬ್ಬಂದಿ ಮತ್ತು ಉಗ್ರರ ನಡುವೆಗುಂಡಿನ ಚಕಮಕಿ ಮುಂದುವರಿದಿದೆ. ಇಬ್ಬರು ಉಗ್ರರು ರಕ್ಷಣಾ ಪಡೆಯ ಬಲೆಗೆ ಬಿದ್ದಿದ್ದಾರೆ ಎಂದು ಎನ್‌‍ಡಿಟಿವಿ ವರದಿ ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.