ADVERTISEMENT

ಫುಲ್ವಾಮಾದಲ್ಲಿ ಉಗ್ರರು; ಗುಂಡಿನ ಚಕಮಕಿಯಲ್ಲಿ ಸೇನೆಯ ಮೇಜರ್‌, 3 ಯೋಧರು ಹುತಾತ್ಮ

ಏಜೆನ್ಸೀಸ್
Published 18 ಫೆಬ್ರುವರಿ 2019, 3:29 IST
Last Updated 18 ಫೆಬ್ರುವರಿ 2019, 3:29 IST
   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ಭಯೋತ್ಪಾದಕ ದಾಳಿಯಾದ ಬೆನ್ನಲೇ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಕಾರ್ಯಾಚರಣೆಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ರಾತ್ರಿ ಶೋಧ ಕಾರ್ಯಾಚರಣೆ ವೇಳೆ ಉಗ್ರರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಮೇಜರ್‌ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿರುವುದಾಗಿವರದಿಯಾಗಿದೆ. ಅಧಿಕಾರಿ ಹಾಗೂ ಮೂವರು ಯೋಧರು ಭಾರತೀಯ ಸೇನೆಯ 55 ರಾಷ್ಟ್ರೀಯ ರೈಫಲ್ಸ್‌ ಪಡೆಗೆ ಸೇರಿದವರಾಗಿದ್ದಾರೆ.

ಪುಲ್ವಾಮಾದ ಪಿಂಗ್ಲನ್‌ ಗ್ರಾಮದಲ್ಲಿ ಕಾಶ್ಮೀರದ ಪೊಲೀಸರು ಹಾಗೂ ಸೇನೆ ಕಾವಲು ಬೇಲಿ ರಚಿಸಿಕೊಂಡು ತಡರಾತ್ರಿ ನಡೆಸಿದ ಶೋಧಕಾರ್ಯಾಚರಣೆ ನಡೆಸಿದೆ. ಕನಿಷ್ಟ ಇಬ್ಬರು ಅಥವಾ ಮೂವರು ಭಯೋತ್ಪಾದಕರು ಇಲ್ಲಿನ ಪ್ರದೇಶದಲ್ಲಿ ಅಡಗಿರುವುದಾಗಿ ಪೊಲೀಸ್‌ ವಕ್ತಾರ ಪ್ರತಿಕ್ರಿಯಿಸಿದ್ದಾರೆ. ಪ್ರಸ್ತುತ ಗುಂಡಿನ ಚಕಮಕಿ ನಿಂತಿದ್ದು, ಶೋಧಕಾರ್ಯ ಮುಂದುವರಿದಿದೆ. ನಾಲ್ವರು ಯೋಧರು ಹುತಾತ್ಮರಾಗಿದ್ದು, ಒಬ್ಬ ಯೋಧ ಗಾಯಗೊಂಡಿದ್ದಾರೆ.

ADVERTISEMENT

ಜೈಷ್‌ ಉಗ್ರ ಗುರುವಾರ 60 ಕೆ.ಜಿ ಆರ್‌ಡಿಎಕ್ಸ್‌ ಸ್ಫೋಟಕ ತುಂಬಿದ್ದ ಕಾರಿನೊಂದಿಗೆ ನಡೆಸಿದ ಆತ್ಮಾಹುತಿ ದಾಳಿಯಲ್ಲಿ ಸಿಆರ್‌ಪಿಎಫ್‌ನ 40 ಯೋಧರು ಹುತಾತ್ಮರಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.