ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಮಂಗಳವಾರ ಗುಂಡಿನ ಚಕಮಕಿ ನಡೆದಿದೆ.
ಪುಲ್ವಾಮದ ಮಾರ್ವಲಾ ಪ್ರಾಂತ್ಯದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆ ಶೋಧ ಕಾರ್ಯ ನಡೆಸುವ ವೇಳೆ, ಉಗ್ರರು ಯೋಧರ ಮೇಲೆ ಮೊದಲು ದಾಳಿ ನಡೆಸಿದ್ದಾರೆ. ಸೇನೆಯು ಪ್ರತಿದಾಳಿ ನಡೆಸಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಗುಂಡಿನ ದಾಳಿ ಮುಂದುವರಿದಿದ್ದು, ಘಟನೆಯ ಬಗ್ಗೆ ಇನ್ನೂ ಪೂರ್ಣ ಮಾಹಿತಿ ಲಭ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.