ADVERTISEMENT

ಕಾಶ್ಮೀರ: ಭದ್ರತಾ ಪಡೆ–ಉಗ್ರರ ನಡುವೆ ಗುಂಡಿನ ಚಕಮಕಿ

ಪಿಟಿಐ
Published 26 ಸೆಪ್ಟೆಂಬರ್ 2021, 4:52 IST
Last Updated 26 ಸೆಪ್ಟೆಂಬರ್ 2021, 4:52 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಶ್ರೀನಗರ: ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಜಮ್ಮು ಮತ್ತು ಕಾಶ್ಮೀರದ ಬಂಡಿಪೊರ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ.

ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರದ ‌ವಾಟ್ನಿರಾ ಪ್ರದೇಶವನ್ನು ಸುತ್ತುವರಿದಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ. ಉಗ್ರರು ಮೊದಲಿಗೆ ಗುಂಡಿನ ದಾಳಿ ನಡೆಸಿದ್ದು, ಭದ್ರತಾ ಪಡೆಗಳು ಸೂಕ್ತ ಪ್ರತಿರೋಧ ತೋರಿವೆ.

ಗುಂಡಿನ ಚಕಮಕಿಯು ಸದ್ಯ ಚಾಲ್ತಿಯಲ್ಲಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.