ADVERTISEMENT

ಜಮ್ಮು–ಕಾಶ್ಮೀರ: ಉಗ್ರರು, ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ

ಪಿಟಿಐ
Published 22 ಜೂನ್ 2020, 6:39 IST
Last Updated 22 ಜೂನ್ 2020, 6:39 IST
ಶೋಧ ಕಾರ್ಯದಲ್ಲಿರುವ ಭದ್ರತಾ ಸಿಬ್ಬಂದಿ– ಸಾಂದರ್ಭಿಕ ಚಿತ್ರ
ಶೋಧ ಕಾರ್ಯದಲ್ಲಿರುವ ಭದ್ರತಾ ಸಿಬ್ಬಂದಿ– ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಸೋಮವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆಯಿತು.

ಜಿಲ್ಲೆಯ ಕಪ್ರಾನ್ ಅರಣ್ಯ ಭಾಗದಲ್ಲಿ ಉಗ್ರರು ಇದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿ, ಭದ್ರತಾ ಪಡೆ ಸಿಬ್ಬಂದಿ ಶೋಧ ಕೈಗೊಂಡರು.

ಶೋಧ ನಡೆಸುತ್ತಿದ್ದ ಭದ್ರತಾ ಸಿಬ್ಬಂದಿ ಮೇಲೆ ಉಗ್ರರು ಗುಂಡು ಹಾರಿಸಿದರು. ಯೋಧರೂ ತಕ್ಕ ಪ್ರತ್ಯುತ್ತರ ನೀಡಿದರು. ಗುಂಡಿನ ಚಕಮಕಿ ನಡೆಯುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.