ಉದ್ಯಮಿ ಅನಿಲ್ ಅಂಬಾನಿ
ಸಂಗ್ರಹ ಚಿತ್ರ
ನವದೆಹಲಿ: ಸಾಲ ವಂಚನೆ, ಹಣದ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 5ರಂದು ವಿಚಾರಣೆಗೆ ಹಾಜರಾಗುವಂತೆ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ನೋಟಿಸ್ ನೀಡಿದೆ.
ದೆಹಲಿಯಲ್ಲಿರುವ ಇ.ಡಿ. ಪ್ರಧಾನ ಕಚೇರಿಯಲ್ಲಿ ಪ್ರಕರಣ ದಾಖಲಾಗಿದ್ದು, ಅಲ್ಲಿಯೇ ವಿಚಾರಣೆಗೆ ಬರುವಂತೆ ತಿಳಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಅನಿಲ್ ಅಂಬಾನಿ ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತದೆ.
ಅನಿಲ್ ಅಂಬಾನಿ ಒಡೆತನದ ಹಲವು ಕಂಪನಿಗಳ ಕಚೇರಿಗಳ ಮೇಲೆ ಇ.ಡಿ. ಕಳೆದವಾರ (ಜುಲೈ 24ರಂದು) ಏಕಕಾಲಕ್ಕೆ ದಾಳಿ ನಡೆಸಿತ್ತು. ಇದಾದ ಒಂದು ವಾರದಲ್ಲೇ, ನೋಟಿಸ್ ನೀಡಲಾಗಿದೆ.
ಅನಿಲ್ ಅಂಬಾನಿ ಸಮೂಹ ಸಂಸ್ಥೆಗಳಿಗೆ ನಿಯಮ ಉಲ್ಲಂಘಿಸಿ, ಅಕ್ರಮವಾಗಿ ಸಾಲ ಮಂಜೂರು ಮಾಡಿದ ಆರೋಪದಲ್ಲಿ ಯೆಸ್ ಬ್ಯಾಂಕ್ ಮೇಲೂ ಇ.ಡಿ ದಾಳಿ ನಡೆಸಿತ್ತು. ಪಿಎಂಎಲ್‌ಎ ಅನುಸಾರ, ಮುಂಬೈ ಮತ್ತು ದೆಹಲಿಯಲ್ಲಿ 25ಕ್ಕೂ ಹೆಚ್ಚು ವ್ಯಕ್ತಿಗಳು ಮತ್ತು 35ಕ್ಕೂ ಹೆಚ್ಚು ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.