ಮುಂಬೈ:ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆ ಉಲ್ಲಂಘನೆ ಆರೋಪದಲ್ಲಿ ವಿಚಾರಣೆಗೆ ಹಾಜರಾಗುವಂತೆ ಶಿವಸೇನಾ ನಾಯಕ ಯಶವಂತ್ ಜಾಧವ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಬುಧವಾರ ಸಮನ್ಸ್ ನೀಡಿದೆ.
ಈ ಕುರಿತು ಜಾರಿ ನಿರ್ದೇಶನಾಲಯ ಮಾಹಿತಿ ನೀಡಿರುವುದಾಗಿ ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.
ಈ ಮಧ್ಯೆ, ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ನವಾಬ್ ಮಲಿಕ್ ಅವರ ಪತ್ನಿ ಹಾಗೂ ಇಬ್ಬರು ಮಕ್ಕಳಿಗೂ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ ಎಂದು ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.