ಎಂಜಿನಿಯರ್ ರಶೀದ್
ಪಿಟಿಐ ಚಿತ್ರ
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಭಾಗಿಯಾಗಲು ಜೈಲಿನಲ್ಲಿರುವ ಸಂಸದ ಎಂಜಿನಿಯರ್ ರಶೀದ್‌ಗೆ ದೆಹಲಿ ನ್ಯಾಯಾಲಯ ಪೆರೋಲ್ ನೀಡಿದೆ.
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದ ಸಂಸದ ರಶೀದ್‌ಗೆ ಜುಲೈ 24ರಿಂದ ಆಗಸ್ಟ್4ರವರೆಗೆ ಸಂಸತ್‌ನ ಮುಂಗಾರು ಅಧಿವೇಶನದಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ.
ಭಯೋತ್ಪಾದನೆಗೆ ಹಣಕಾಸಿನ ನೆರವು ನೀಡಿದ್ದ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ 2019ರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ರಶೀದ್ ಅವರನ್ನು ಬಂಧಿಸಿತ್ತು. ಅಂದಿನಿಂದ ಅವರನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು.
ಅಧಿವೇಶನದಲ್ಲಿ ಭಾಗಿಯಾಗಲು ರಶೀದ್ ಅವರಿಗೆ ಹೆಚ್ಚುವರಿ ಸೆಷನ್ ಜಡ್ಜ್ ಚಂದೇರ್ ಜಿತ್ ಸಿಂಗ್ ಅವರು ಕಸ್ಟಡಿ ಪೆರೋಲ್ ನೀಡಿದ್ದಾರೆ. ಪೆರೋಲ್ ವೇಳೆ ರಶೀದ್ ಜತೆಗೆ ಶಸ್ತ್ರಸಜ್ಜಿತ ಪೊಲೀಸ್ ಸಿಬ್ಬಂದಿ ಇರಲಿದ್ದಾರೆ.
2024ರ ಲೋಕಸಭಾ ಚುನಾವಣೆಯಲ್ಲಿ ಬಾರಾಮುಲ್ಲಾ ಕ್ಷೇತ್ರದಲ್ಲಿ ಒಮರ್ ಅಬ್ದುಲ್ಲಾ ಅವರನ್ನು ಪರಾಭವಗೊಳಿಸಿ ಗೆಲುವು ಸಾಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.