ADVERTISEMENT

ಪಿಎಂಒ ಕರೆಗಳಿಗೆ ಇಂಗ್ಲಿಷ್ ಪತ್ರಿಕೆಗಳು ನಡುಗುತ್ತವೆ: ಸುಬ್ರಮಣಿಯನ್‌ ಸ್ವಾಮಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಡಿಸೆಂಬರ್ 2022, 7:41 IST
Last Updated 9 ಡಿಸೆಂಬರ್ 2022, 7:41 IST
 ಸುಬ್ರಮಣಿಯನ್‌ ಸ್ವಾಮಿ
ಸುಬ್ರಮಣಿಯನ್‌ ಸ್ವಾಮಿ   

ನವದೆಹಲಿ: ಪ್ರಧಾನ ಮಂತ್ರಿಯವರ ಕಾರ್ಯಾಲಯದ (ಪಿಎಂಒ) ಕರೆಗಳಿಗೆ ಇಂಗ್ಲಿಷ್ ಪತ್ರಿಕೆಗಳು ನಡುಗುತ್ತವೆ ಎಂದು ಬಿಜೆಪಿ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್‌ ಸ್ವಾಮಿ ಹೇಳಿದ್ದಾರೆ.

‘ಪಿಎಂಒ ಕರೆಗಳಿಗೆ ಇಂಗ್ಲಿಷ್ ಪತ್ರಿಕೆಗಳು ನಡುಗುತ್ತವೆ. ಹೀಗಾಗಿ ಈ ಪತ್ರಿಕೆಗಳು ಪ್ರಧಾನಿ ಮೋದಿಯವರ ನೀತಿಗಳನ್ನು ವಿರೋಧಿಸುವವರ ಅರ್ಹವಾದ ವಿಷಯಗಳನ್ನು (ಸುದ್ದಿಗಳನ್ನು) ವರದಿ ಮಾಡುವುದಿಲ್ಲ. ದೇಶದಲ್ಲಿ ಹಲವು ಭಾಷಾ ಪತ್ರಿಕೆಗಳು ನನಗೆ ಉತ್ತಮ ಕವರೇಜ್ ನೀಡುತ್ತಿದ್ದು, ಇಲ್ಲಿಯವರೆಗೆ ನಾನು ತಲೆಕೆಡಿಸಿಕೊಂಡಿಲ್ಲ. ಆದರೆ, ಈಗ ಇಂಗ್ಲಿಷ್‌ಗಾಗಿ ನಾನು ವಿದೇಶಿ ಮಾಧ್ಯಮಗಳಿಗೂ ಬೈಟ್‌ಗಳನ್ನು ನೀಡಲು ಪ್ರಾರಂಭಿಸುತ್ತೇನೆ’ ಎಂದು ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.

ಮಾದಕ ವಸ್ತುಗಳ ಕಳ್ಳಸಾಗಣೆ ತಡೆದರೆ ರಾಷ್ಟ್ರೀಯ ಭದ್ರತೆಯನ್ನು ಬಲಪಡಿಸಬಹುದು ಎಂಬ ಗೃಹ ಸಚಿವ ಅಮಿತ್‌ ಶಾ ಅವರ ಹೇಳಿಕೆ ಕುರಿತು ಇತ್ತೀಚೆಗೆ ಪ್ರತಿಕ್ರಿಯಿಸಿದ್ದ ಸ್ವಾಮಿ, ‘ಮಾದಕ ವಸ್ತುಗಳ ಕಳ್ಳಸಾಗಣೆಯನ್ನು ತಡೆಯಲು ಗೃಹ ಸಚಿವರು ಏನು ಮಾಡಿದ್ದಾರೆ? ಅಥವಾ ಈ ಮೂಲಕ ತನ್ನ ವೈಫಲ್ಯಗಳನ್ನು ಒಪ್ಪಿಕೊಳ್ಳುತ್ತಿದ್ದಾರೆಯೇ? ಎಂದು ಪ್ರಶ್ನಿಸಿದ್ದರು.

ADVERTISEMENT

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಅವರನ್ನು ತೀವ್ರ ತರಾಟೆಗೆ ತೆಗೆದುಕೊಳ್ಳುವ ಮೂಲಕ ಸುಬ್ರಮಣಿಯನ್‌ ಸ್ವಾಮಿ ಅವರು ಸದಾ ಸುದ್ದಿಯಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.