ADVERTISEMENT

ಸೆ.11ಕ್ಕೆ ಸ್ನಾತಕೋತ್ತರ ನೀಟ್

​ಪ್ರಜಾವಾಣಿ ವಾರ್ತೆ
Published 13 ಜುಲೈ 2021, 18:18 IST
Last Updated 13 ಜುಲೈ 2021, 18:18 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಸೆಪ್ಟೆಂಬರ್ 11ರಂದು ನಡೆಯಲಿದೆ ಎಂದು ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮಂಗಳವಾರ ತಿಳಿಸಿದ್ದಾರೆ.

ವೈದ್ಯಕೀಯ ಕಾಲೇಜುಗಳಲ್ಲಿ 30,000 ಸ್ನಾತಕೋತ್ತರ ಸೀಟುಗಳಿಗೆ ಪ್ರವೇಶ ನೀಡಲು ಪ್ರತಿವರ್ಷ ಪ್ರವೇಶ ಪರೀಕ್ಷೆ ನಡೆಯುತ್ತದೆ.

‘2021ರ ಸೆಪ್ಟೆಂಬರ್ 11ರಂದು ನಾವು ನೀಟ್ ಸ್ನಾತಕೋತ್ತರ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿದ್ದೇವೆ. ಯುವ ವೈದ್ಯಕೀಯ ಆಕಾಂಕ್ಷಿಗಳಿಗೆ ನನ್ನ ಶುಭಾಶಯಗಳು’ ಎಂದು ಸಚಿವರು ಹೇಳಿದ್ದಾರೆ.

ADVERTISEMENT

ಕೋವಿಡ್-19 ಸಾಂಕ್ರಾಮಿಕದ ಕಾರಣಕ್ಕೆ, ರಾಷ್ಟ್ರೀಯ ಪರೀಕ್ಷಾ ಮಂಡಳಿಯು ಪರೀಕ್ಷೆಯನ್ನು ಏಪ್ರಿಲ್‌ಗೆ ಮುಂದೂಡಿತ್ತು. ಎರಡನೇ ಅಲೆ ಆವರಿಸಿದ್ದರಿಂದ, ಆಗಸ್ಟ್ 31ಕ್ಕೂ ಮೊದಲು ಪರೀಕ್ಷೆ ನಡೆಯುವುದಿಲ್ಲ ಎಂದು ಸರ್ಕಾರ ತಿಳಿಸಿತ್ತು. ಟೆಲಿಕನ್ಸಲ್ಟೇಷನ್ ಮೊದಲಾದ ಕೋವಿಡ್ ಕರ್ತವ್ಯಗಳಿಗೆ ಅಂತಿಮ ವರ್ಷದ ವೈದ್ಯಕೀಯ ಪದವಿ ವಿದ್ಯಾರ್ಥಿಗಳನ್ನು ನಿಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.