ADVERTISEMENT

ವಿಡಿಯೊ ಕಾನ್ಫರೆನ್ಸ್‌ನಲ್ಲಿ ರಾಯಭಾರಿಗಳ ವಿವರ

ಪಿಟಿಐ
Published 21 ಮೇ 2020, 21:20 IST
Last Updated 21 ಮೇ 2020, 21:20 IST

ನವದೆಹಲಿ: ಇದೇ ಪ್ರಥಮ ಬಾರಿ ಏಳು ರಾಷ್ಟ್ರಗಳ ರಾಯಭಾರಿಗಳ ಹಿನ್ನೆಲೆಯ ವಿವರಗಳನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಸ್ವೀಕರಿಸಿದರು.

ರಾಷ್ಟ್ರಪತಿ ಭವನದ ಇತಿಹಾಸದಲ್ಲಿ ಇದೇ ಪ್ರಥಮ ಬಾರಿ ಡಿಜಿಟಲ್‌ ಮಾಧ್ಯಮದ ಮೂಲಕ ರಾಯಭಾರಿಗಳ ವಿವರಗಳನ್ನು ಪಡೆಯಲಾಯಿತು ಎಂದು ಪ್ರಕಟಣೆ ತಿಳಿಸಿದೆ.

ರಾಯಭಾರಿಗಳನ್ನು ಉದ್ದೇಶಿಸಿ ಮಾತನಾಡಿದ ರಾಮನಾಥ ಕೋವಿಂದ್‌ ಜಾಗತಿಕ ಸಮುದಾಯಕ್ಕೆ ಕೋವಿಡ್‌–19 ಸಾಂಕ್ರಾಮಿಕ ಕಾಯಿಲೆ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಬಿಕ್ಕಟ್ಟು ಪರಿಹರಿಸಲು ಪರಸ್ಪರ ಸಹಕಾರ ಅಗತ್ಯ ಎಂದು ಪ್ರತಿಪಾದಿಸಿದರು.

ADVERTISEMENT

ಡಿಜಿಟಲ್‌ ತಂತ್ರಜ್ಞಾನದ ಮೂಲಕ ಕೋವಿಡ್‌–19 ಸೃಷ್ಟಿಸಿರುವ ಹೊಸ ಸವಾಲುಗಳಿಗೆ ಪರಿಹಾರ ಕಂಡುಕೊ ಳ್ಳುವ ಪ್ರಯತ್ನ ಮಾಡಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.