ADVERTISEMENT

ಪಾಕಿಸ್ತಾನದ ಪರ ಗೂಢಚಾರಿಕೆ: ಜಾಮೀನು ಕೋರಿ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅರ್ಜಿ

ಪಿಟಿಐ
Published 10 ಜೂನ್ 2025, 14:39 IST
Last Updated 10 ಜೂನ್ 2025, 14:39 IST
<div class="paragraphs"><p>ಜ್ಯೋತಿ ಮಲ್ಹೋತ್ರಾ</p></div>

ಜ್ಯೋತಿ ಮಲ್ಹೋತ್ರಾ

   

ಹಿಸಾರ್: ಪಾಕಿಸ್ತಾನದ ಪರ ಗೂಢಚಾರಿಕೆ ಮಾಡಿದ ಆರೋಪದಡಿ ಬಂಧಿತರಾಗಿರುವ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ, ಜಾಮೀನು ಕೋರಿ ಸ್ಥಳೀಯ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ವಕೀಲರ ಮೂಲಕ ಇಲ್ಲಿನ ಜೆಎಂಎಫ್‌ಸಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ನ್ಯಾಯಾಧೀಶ ಸುನಿಲ್ ಕುಮಾರ್ ಅವರು ಜೂನ್‌ 11ರ ಒಳಗೆ ಪ್ರತಿಕ್ರಿಯೆ  ಸಲ್ಲಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.

ADVERTISEMENT

ಜೂನ್‌ 9ರಂದು ಜ್ಯೋತಿ ಅವರ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿದ್ದ ಕೋರ್ಟ್ ವಿಚಾರಣೆಯನ್ನು ಜೂನ್ 23ಕ್ಕೆ ಮುಂದೂಡಿತ್ತು. ವಿಡಿಯೊ ಕಾನ್ಫರೆನ್ಸ್‌ ಮೂಲಕ ಆರೋಪಿ ವಿಚಾರಣೆ ಎದುರಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.