ನವದೆಹಲಿ: ‘ಆಪರೇಷನ್ ಸಿಂಧೂರ’ ವಿಷಯದ ಬಗ್ಗೆ ಜೂನ್ 1ರಿಂದ 30ರವರೆಗೆ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ ಎಂದು ರಕ್ಷಣಾ ಸಚಿವಾಲಯ ಭಾನುವಾರ ಘೋಷಿಸಿದೆ.
ಸಚಿವಾಲಯವು ತನ್ನ ‘ಎಕ್ಸ್’ ಖಾತೆಯಲ್ಲಿ, ‘ಮೊದಲ ಮೂರು ಸ್ಥಾನ ಪಡೆಯುವ ವಿಜೇತರಿಗೆ ತಲಾ ₹10,000 ನಗದು ಮತ್ತು ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ 78ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯಲ್ಲಿ ಭಾಗಿಯಾಗುವ ಅವಕಾಶ ನೀಡಲಾಗುವುದು’ ಎಂದು ತಿಳಿಸಿದೆ.
ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪ್ರಬಂಧ ಬರೆಯಬಹುದಾಗಿದೆ ಎಂದು ತಿಳಿಸಿದೆ.
‘ಆಪರೇಷನ್ ಸಿಂಧೂರ’ ಲೋಗೊ ಮತ್ತು ಸ್ಪರ್ಧೆಯ ವಿವರಗಳಿರುವ ಪೋಸ್ಟರ್ ಅನ್ನು ಅದು ಹಂಚಿಕೊಂಡಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆಯು ಮೇ 7ರಂದು ‘ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿ ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಉಗ್ರರ ಅಡಗುದಾಣಗಳನ್ನು ಧ್ವಂಸ ಮಾಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.