ADVERTISEMENT

ಅಗತ್ಯ ವಸ್ತುಗಳ ಸರಬರಾಜಿನ ಬಗ್ಗೆ ಭಯ ಬೇಡ: ಕಣಿವೆ ರಾಜ್ಯದ ಜನರಿಗೆ ಸರ್ಕಾರದ ಅಭಯ

ಪಿಟಿಐ
Published 10 ಮೇ 2025, 11:29 IST
Last Updated 10 ಮೇ 2025, 11:29 IST
   

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಜನರು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ. ಕೇಂದ್ರಾಡಳಿತ ಪ್ರದೇಶದಲ್ಲಿ ಆಹಾರ, ದವಸ ಧಾನ್ಯ, ತೈಲ ಹಾಗೂ ಅಡುಗೆ ಅನಿಲ ಸೇರಿದಂತೆ ಅಗತ್ಯ ಸರಕುಗಳ ಕೊರತೆ ಉಂಟಾಗಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಆಹಾರ ಸಚಿವ ಸತೀಶ್ ಶರ್ಮಾ ಅವರು ಜನರಿಗೆ ಭರವಸೆ ನೀಡಿದ್ದಾರೆ.

ಅಗತ್ಯ ವಸ್ತುಗಳ ಸರಬರಾಜಿಗೆ ಸೂಕ್ತ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಎಲ್ಲ ವಿತರಣಾ ಕೇಂದ್ರಗಳಲ್ಲಿ ಅಗತ್ಯ ವಸ್ತುಗಳ ದಾಸ್ತಾನಿದೆ. ಅಧಿಕಾರಿಗಳು ಪರಿಸ್ಥಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದು, ಸಾಮಾನ್ಯ ಜನರು ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.

ಕೇಂದ್ರಾಡಳಿತ ಪ್ರದೇಶದಲ್ಲಿ ಸಂಚರಿಸುವವರಿಗೆ, ಸರಿಯಾದ ಸಾರಿಗೆ ವ್ಯವಸ್ಥೆಯಿದೆ. ಪ್ರಯಾಣಿಕರಿಗೆ ಹೆಚ್ಚಿನ ದರ ವಿಧಿಸುವ ಸಾರಿಗೆ ಸಂಸ್ಥೆಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ADVERTISEMENT

ಈ ಸಂದರ್ಭದಲ್ಲಿ ಎಲ್ಲರೂ ಒಗ್ಗಟ್ಟಿನ್ಲಲಿರಿ, ಶಾಂತ ರೀತಿಯಿಂದ ವರ್ತಿಸಿ. ಜನರು ವದಂತಿಗಳನ್ನು ನಂಬಬಾರದು ಸರ್ಕಾರದ ಅಧಿಕೃತ ಮಾಹಿತಿಗಳನ್ನು ಮಾತ್ರ ನಂಬಿ ಎಂದು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.