ADVERTISEMENT

ಉತ್ತರ ಪ್ರದೇಶದ ಪ್ರಗತಿ ಕಂಡು ಪ್ರತಿಯೊಬ್ಬ ಭಾರತೀಯನಿಗೂ ಹರ್ಷ: ಯೋಗಿ ಆದಿತ್ಯನಾಥ್‌

ಪಿಟಿಐ
Published 3 ಜನವರಿ 2024, 16:00 IST
Last Updated 3 ಜನವರಿ 2024, 16:00 IST
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌    

ಲಖನೌ: ‘2017ಕ್ಕೂ ಮೊದಲು ನಿರಾಶೆ, ಹತಾಶೆ ಹಾಗೂ ಅರಾಜಕತೆಗಳೇ ತುಂಬಿದ್ದ ರಾಜ್ಯದ ಪ್ರಗತಿ ಕಂಡು ಪ್ರತಿಯೊಬ್ಬ ಭಾರತೀಯನಿಗೂ ಸಂತಸವಾಗುತ್ತಿದ್ದು, ಇಡೀ ವಿಶ್ವವೇ ಆಶ್ಚರ್ಯಚಕಿತವಾಗಿದೆ’ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ.

‘ಈ ಹಿಂದೆ ಆರು–ಏಳನೇ ಸ್ಥಾನದಲ್ಲಿದ್ದ ರಾಜ್ಯದ ಆರ್ಥಿಕತೆ ಈ ಏಳು ವರ್ಷಗಳಲ್ಲಿ ದೇಶದಲ್ಲೇ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳೆದಿದೆ. ಪ್ರಸ್ತುತ ರಾಜ್ಯವು ದೇಶದಲ್ಲಿಯೇ ಅತೀ ಹೆಚ್ಚಿನ ಬೆಳವಣಿಗೆ ದರ ಹಾಗೂ ಆರ್ಥಿಕ ಅಭಿವೃದ್ಧಿ ದರ ಹೊಂದಿದ್ದು, ದೇಶದ ಅತಿದೊಡ್ಡ ಆರ್ಥಿಕತೆಯಾಗುವತ್ತ ದಾಪುಗಾಲಿಟ್ಟಿದೆ’ ಎಂದು ಆದಿತ್ಯನಾಥ್‌ ಪ್ರತಿಪಾದಿಸಿದ್ದಾರೆ.

2017ರಲ್ಲಿ ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್‌ ನೇತೃತ್ವದ ಸರ್ಕಾರವನ್ನು ಮಣಿಸಿ ಬಿಜೆಪಿ ಅಧಿಕಾರಕ್ಕೆ ಬಂದಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.