ADVERTISEMENT

ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ ಭಟ್ಟಾಚಾರ್ಯ ಆರೋಗ್ಯ ಸ್ಥಿತಿ ಗಂಭೀರ

ಏಜೆನ್ಸೀಸ್
Published 10 ಡಿಸೆಂಬರ್ 2020, 3:31 IST
Last Updated 10 ಡಿಸೆಂಬರ್ 2020, 3:31 IST
ಬುದ್ಧದೇವ ಭಟ್ಟಾಚಾರ್ಯ
ಬುದ್ಧದೇವ ಭಟ್ಟಾಚಾರ್ಯ   

ಕೋಲ್ಕತ್ತ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ‌ ಭಟ್ಟಾಚಾರ್ಯ ಅವರು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

76 ವರ್ಷದ ಬುದ್ಧದೇವ‌ಅವರನ್ನು ಇಲ್ಲಿನ ವುಡ್‌ಲ್ಯಾಂಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗಿದ್ದು ನೆಗೆಟಿವ್‌ ವರದಿ ಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ

ಅವರಿಗೆ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನ್ಯಮೋನಿಯಾ ಲಕ್ಷಣಗಳು ಗೋಚರಿಸಿವೆ ಎಂದು ವೈದ್ಯರು ಹೇಳಿದ್ದಾರೆ.

ADVERTISEMENT

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುದ್ಧದೇವ್‌ ಭಟ್ಟಾಚಾರ್ಯ ಬೇಗ ಗುಣಮುಖರಾಗಲಿ ಎಂದು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.