ADVERTISEMENT

ಬಿಜೆಡಿ ತೊರೆದ ಜಯ ಪಾಂಡಾ ಬಿಜೆಪಿಗೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2019, 18:11 IST
Last Updated 4 ಮಾರ್ಚ್ 2019, 18:11 IST
ಬಿಜೆಪಿ ಸೇರಿದ ಜಯ ಪಾಂಡಾ ಅವರನ್ನು ಅಭಿನಂದಿಸಿದ ಅಮಿತ್ ಶಾ–ಪಿಟಿಐ ಚಿತ್ರ
ಬಿಜೆಪಿ ಸೇರಿದ ಜಯ ಪಾಂಡಾ ಅವರನ್ನು ಅಭಿನಂದಿಸಿದ ಅಮಿತ್ ಶಾ–ಪಿಟಿಐ ಚಿತ್ರ   

ನವದೆಹಲಿ: ಬಿಜು ಜನತಾದಳ ಮಾಜಿ ಸಂಸದ ವೈಜಯಂತ್ ಜಯ ಪಾಂಡಾ ಅವರು ಸೋಮವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಒಡಿಶಾದಲ್ಲಿ ಬಿಜೆಪಿ ಶಕ್ತಿ ಹೆಚ್ಚಿದಂತಾಗಿದೆ.

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಪಾಂಡಾಸೋಮವಾರ ಇಲ್ಲಿ ಭೇಟಿಯಾದರು. ಒಡಿಶಾ ಬಿಜೆಪಿ ಘಟಕದ ಮುಖಂಡರು, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಜುಯೆಲ್ ಓರಮ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.

ನವೀನ್ ಪಟ್ನಾಯಕ್ ನೇತೃತ್ವದ ಒಡಿಶಾ ಸರ್ಕಾರದ ಪರಿಸ್ಥಿತಿ ತೀರಾ ಹದಗೆಟ್ಟಿದೆ ಎಂದು ಪಾಂಡಾ ವಾಗ್ದಾಳಿ ನಡೆಸಿದರು. ‘ರಾಜ್ಯದಲ್ಲಿ ಬದಲಾವಣೆ ಬೇಕಿದ್ದು, ಅದು ಬಿಜೆಪಿಯಿಂದ ಮಾತ್ರ ಸಾಧ್ಯ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ADVERTISEMENT

ಪಾಂಡಾ ಅವರ ಸೇರ್ಪಡೆಯಿಂದ ರಾಜ್ಯದ ಕರಾವಳಿಯಲ್ಲಿ ಪಕ್ಷದ ಪ್ರಾಬಲ್ಯ ಹೆಚ್ಚಲಿದೆ ಎಂದು ಬಿಜೆಪಿ ಅಭಿಪ್ರಾಯಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.