ADVERTISEMENT

ಕೇರಳ ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಲತಿಕಾ ಎನ್‌ಸಿಪಿಗೆ?

ವಿಧಾನಸಭೆ ಚುನಾವಣೆಗೆ ಟಿಕೆಟ್ ನೀಡದ ಕಾಂಗ್ರೆಸ್‌ ವಿರುದ್ಧ ತಲೆ ಬೋಳಿಸಿಕೊಂಡು ಪ್ರತಿಭಟಿಸಿದ್ದ ನಾಯಕಿ

ಪಿಟಿಐ
Published 23 ಮೇ 2021, 13:04 IST
Last Updated 23 ಮೇ 2021, 13:04 IST
ಕೇರಳದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ನೀಡಲಿಲ್ಲ ಎನ್ನುವ ಕಾರಣಕ್ಕಾಗಿ ತಿರುವನಂತಪುರದ ಕೆಪಿಸಿಸಿ ಕಚೇರಿ ಮುಂದೆಯೇ ಕೇರಳ ಮಹಿಳಾ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಲತಿಕಾ ಸುಭಾಷ್ ಅವರು ತಲೆಬೋಳಿಸಿಕೊಂಡು ಪ್ರತಿಭಟನೆ ವ್ಯಕ್ತಪಡಿಸಿದ್ದ ದೃಶ್ಯ –ಪಿಟಿಐ ಚಿತ್ರ
ಕೇರಳದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ನೀಡಲಿಲ್ಲ ಎನ್ನುವ ಕಾರಣಕ್ಕಾಗಿ ತಿರುವನಂತಪುರದ ಕೆಪಿಸಿಸಿ ಕಚೇರಿ ಮುಂದೆಯೇ ಕೇರಳ ಮಹಿಳಾ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಲತಿಕಾ ಸುಭಾಷ್ ಅವರು ತಲೆಬೋಳಿಸಿಕೊಂಡು ಪ್ರತಿಭಟನೆ ವ್ಯಕ್ತಪಡಿಸಿದ್ದ ದೃಶ್ಯ –ಪಿಟಿಐ ಚಿತ್ರ   

ತಿರುವನಂತಪುರ: ಕೇರಳ ಮಹಿಳಾ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಲತಿಕಾ ಸುಭಾಷ್ ಅವರು ಶರದ್ ಪವಾರ್ ನೇತೃತ್ವದ ಎನ್‌ಸಿಪಿಗೆ ಸೇರ್ಪಡೆಗೊಳ್ಳಲು ಸಜ್ಜಾಗಿದ್ದಾರೆ.

ಕೇರಳದಲ್ಲಿ ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ತಮಗೆ ಟಿಕೆಟ್ ಸಿಗಲಿಲ್ಲ ಎನ್ನುವ ಕಾರಣಕ್ಕಾಗಿ ಕೆಪಿಸಿಸಿ ಕಚೇರಿಯ ಮುಂದೆಯೇ ಲತಿಕಾ ಅವರು ತಮ್ಮ ತಲೆಬೋಳಿಸಿಕೊಂಡು ಪ್ರತಿಭಟನೆ ನಡೆಸಿದ್ದರು.

‘ಎನ್‌ಸಿಪಿ ಸೇರ್ಪಡೆ ಕುರಿತು ಕೇರಳ ಎನ್‌ಸಿಪಿ ಮುಖ್ಯಸ್ಥ ಪಿ.ಸಿ. ಚಾಕೊ ಅವರೊಂದಿಗೆ ಚರ್ಚೆ ನಡೆಸಲಾಗಿದೆ. ಶೀಘ್ರದಲ್ಲೇ ಸೇರ್ಪಡೆ ಕುರಿತು ಅಧಿಕೃತವಾಗಿ ಘೋಷಿಸಲಾಗುವುದು’ ಎಂದು ಲತಿಕಾ ಅವರು ತಿಳಿಸಿದ್ದಾರೆ.

ADVERTISEMENT

ಕಾಂಗ್ರೆಸ್‌ನ ಹಿರಿಯ ಮುಖಂಡರೂ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರೂ ಆಗಿದ್ದ ಚಾಕೊ ಅವರು ಇತ್ತೀಚೆಗಷ್ಟೇ ಎನ್‌ಸಿಪಿಗೆ ಸೇರ್ಪಡೆಗೊಂಡಿದ್ದಾರೆ.

‘ಕಾಂಗ್ರೆಸ್ ಸಂಪ್ರದಾಯದ ಹಾದಿಯಲ್ಲೇ ಇರುವ ಎನ್‌ಸಿಪಿಯು ರಾಷ್ಟ್ರೀಯ ಪಕ್ಷವಾಗಿದೆ. ಕಾಂಗ್ರೆಸ್ ಮುಖಂಡರಾಗಿದ್ದ ಚಾಕೊ ಅವರೊಂದಿಗೆ ಚಿಕ್ಕ ವಯಸ್ಸಿನಿಂದಲೇ ನಿಕಟ ಸಂಪರ್ಕ ಹೊಂದಿದ್ದೇನೆ. ಹಾಗಾಗಿ, ಎನ್‌ಸಿಪಿ ಸೇರ್ಪಡೆ ಕುರಿತು ಅವರೊಂದಿಗೆ ಚರ್ಚಿಸಿದ್ದೇನೆ. ಕಾಂಗ್ರೆಸ್‌ನೊಂದಿಗೆ ದೀರ್ಘಕಾಲ ಇದ್ದ ನಾನು ಇತರ ಯಾವುದೇ ರಾಜಕೀಯ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲಾರೆ’ ಎಂದೂ ಲತಿಕಾ ಸುಭಾಷ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.