ಫಕೀರ್ ಮೊಹಮ್ಮದ್ ಖಾನ್
Credit: X/@BJPJnk
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮಾಜಿ ಶಾಸಕ, ಬಿಜೆಪಿ ನಾಯಕ ಫಕೀರ್ ಮೊಹಮ್ಮದ್ ಖಾನ್ ಅವರು ಇಂದು (ಗುರುವಾರ) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
62 ವರ್ಷದ ಖಾನ್ ಅವರು ತುಳಸಿಬಾಗ್ ಸರ್ಕಾರಿ ವಸತಿಗೃಹದೊಳಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಖಾನ್ ಆತ್ಮಹತ್ಯೆ ಮಾಡಿಕೊಂಡಿರುವುದು ದುರದೃಷ್ಟಕರ ಎಂದು ಬಿಜೆಪಿ ವಕ್ತಾರ ಅಲ್ತಾಫ್ ಠಾಕೂರ್ ಬೇಸರ ಹೊರಹಾಕಿದ್ದಾರೆ.
1996ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಆಯ್ಕೆಯಾಗಿದ್ದ ಖಾನ್, 2020ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಆದರೆ, ಕೆಲವು ತಿಂಗಳ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಪಡೆಯುವಲ್ಲಿ ಅವರು ವಿಫಲರಾಗಿದ್ದರು.
ಸಿಎಂ ಸಂತಾಪ: ಫಕೀರ್ ಮೊಹಮ್ಮದ್ ಖಾನ್ ಅವರ ನಿಧನಕ್ಕೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಂತಾಪ ವ್ಯಕ್ತಪಡಿಸಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.