ADVERTISEMENT

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅಸ್ವಸ್ಥ: ಏಮ್ಸ್‌ಗೆ ದಾಖಲು

ಪಿಟಿಐ
Published 13 ಅಕ್ಟೋಬರ್ 2021, 14:09 IST
Last Updated 13 ಅಕ್ಟೋಬರ್ 2021, 14:09 IST
ಮಾಜಿ ಪ್ರಧಾನ ಮಂತ್ರಿ ಮನಮೋಹನ್‌ ಸಿಂಗ್‌
ಮಾಜಿ ಪ್ರಧಾನ ಮಂತ್ರಿ ಮನಮೋಹನ್‌ ಸಿಂಗ್‌   

ನವದೆಹಲಿ: ಮಾಜಿ ಪ್ರಧಾನ ಮಂತ್ರಿ ಮನಮೋಹನ್‌ ಸಿಂಗ್‌ ಅವರು ಬುಧವಾರ ಸಂಜೆ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

89 ವರ್ಷ ವಯಸ್ಸಿನ ಮನಮೋಹನ್‌ ಸಿಂಗ್‌ ಅವರು ಸೋಮವಾರ ಜ್ವರದಿಂದ ಬಳಲಿದ್ದರು. ಜ್ವರದಿಂದ ಚೇತರಿಸಿಕೊಂಡರೂ ಅತಿಯಾದ ಆಯಾಸ ಕಾಡಿತ್ತು ಹಾಗೂ ದ್ರವ ರೂಪದ ಆಹಾರವನ್ನಷ್ಟೇ ತೆಗೆದುಕೊಳ್ಳುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಈ ವರ್ಷ ಏಪ್ರಿಲ್‌ನಲ್ಲಿ ಮನಮೋಹನ್‌ ಸಿಂಗ್‌ ಅವರಿಗೆ ಕೋವಿಡ್‌ ದೃಢಪಟ್ಟಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.