ADVERTISEMENT

ಮಾಜಿ ಸಚಿವ ಬಿಜೆಪಿಗೆ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2019, 19:07 IST
Last Updated 20 ಏಪ್ರಿಲ್ 2019, 19:07 IST
ಎಸ್.ಕೃಷ್ಣಕುಮಾರ್‌
ಎಸ್.ಕೃಷ್ಣಕುಮಾರ್‌   

ನವದೆಹಲಿ: ಮಾಜಿ ಕೇಂದ್ರ ಸಚಿವ ಹಾಗೂ ಕೇರಳದ ಕಾಂಗ್ರೆಸ್‌ ಮುಖಂಡ ಎಸ್‌. ಕೃಷ್ಣಕುಮಾರ್‌ ಶನಿವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಬಲಪಡಿಸುವ ಉದ್ದೇಶದಿಂದ ಕೆಲಸ ಮಾಡುವುದಾಗಿ ಅವರು ಹೇಳಿದ್ದಾರೆ.

80 ವರ್ಷದ ಕೃಷ್ಣಕುಮಾರ್‌ ಅವರು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮುಖಂಡರಾದ ಅನಿಲ್‌ ಬಲೂನಿ ಮತ್ತು ಷಾನವಾಜ್‌ ಹುಸೇನ್‌ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆ
ಗೊಂಡರು.

ADVERTISEMENT

‘ಮೋದಿ ಅವರು ದೇಶದ ಅಭಿವೃದ್ಧಿಗೆ ದುಡಿಯುತ್ತಿದ್ದಾರೆ. ಅವರ ನಾಯಕತ್ವ ಮುಂದುವರಿಯಲಿದೆ‘ ಎಂದೂ ಕೃಷ್ಣಕುಮಾರ್‌ ಹೇಳಿದ್ದಾರೆ. 80 ಮತ್ತು 90ರ ದಶಕದಲ್ಲಿ ಇವರು ಮೂರು ಬಾರಿ ಕೇರಳದ ಕೊಲ್ಲಂ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.