ನವದೆಹಲಿ: ಅಬಕಾರಿ ನೀತಿ ಹಗರಣದ ನಂಟಿನ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯವು ನೀಡಿರುವ ಆದೇಶವನ್ನು ಪ್ರಶ್ನಿಸಿ, ಎಎಪಿ ನಾಯಕ ಮನೀಷ್ ಸಿಸೋಡಿಯಾ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿಸುವಂತೆ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ದೆಹಲಿ ಹೈಕೋರ್ಟ್ ಸೂಚಿಸಿದೆ.
ನ್ಯಾಯಮೂರ್ತಿ ಮನೋಜ್ ಕುಮಾರ್ ಓಹ್ರಿ ಅವರು ಇ.ಡಿ.ಗೆ ನೋಟಿಸ್ ಜಾರಿ ಮಾಡಿದ್ದಾರೆ.
ಮನೀಷ್ ಸಿಸೋಡಿಯಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಡಿ. 20ಕ್ಕೆ ನಿಗದಿ ಮಾಡಲಾಗಿದೆ. ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಸಲ್ಲಿಸಿರುವ ಇದೇ ರೀತಿಯ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಲಾಗಿದೆ.
ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮನೀಷ್ ಸಿಸೋಡಿಯಾ ಅವರು, ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.