ADVERTISEMENT

ಬಂಧನ ಪ್ರಶ್ನಿಸಿ ಕೇಜ್ರಿವಾಲ್‌ ಅರ್ಜಿ: ಸುಪ್ರೀಂ ಕೋರ್ಟ್‌ ತೀರ್ಪು ಇಂದು

ಪಿಟಿಐ
Published 12 ಸೆಪ್ಟೆಂಬರ್ 2024, 22:11 IST
Last Updated 12 ಸೆಪ್ಟೆಂಬರ್ 2024, 22:11 IST
ಕೇಜ್ರಿವಾಲ್
ಕೇಜ್ರಿವಾಲ್   

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಜಾಮೀನು ಕೋರಿ ಮತ್ತು ತನ್ನನ್ನು ಸಿಬಿಐ ಬಂಧಿಸಿದ್ದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ತೀರ್ಪನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ಪ್ರಕಟಿಸಲಿದೆ.

ಸುಪ್ರೀಂ ಕೋರ್ಟ್‌ ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಿರುವ ಸೆ.13ರ ಪ್ರಕರಣಗಳ ಪಟ್ಟಿಯ ಪ್ರಕಾರ ನ್ಯಾಯಮೂರ್ತಿ ಸೂರ್ಯ ಕಾಂತ್‌ ನೇತೃತ್ವದ ಪೀಠ ತೀರ್ಪು ಪ್ರಕಟಿಸಲಿದೆ. ನ್ಯಾಯಮೂರ್ತಿ ಉಜ್ಜಲ್‌ ಭುಯಾನ್‌ ಅವರೂ ಇರುವ ಪೀಠವು ಸೆ.5ರಂದು ತೀರ್ಪನ್ನು ಕಾಯ್ದಿರಿಸಿತ್ತು.

ಜಾಮೀನು ನಿರಾಕರಿಸಿದ್ದನ್ನು ಹಾಗೂ ಸಿಬಿಐ ಬಂಧಿಸಿರುವುದನ್ನು ಪ್ರಶ್ನಿಸಿ ಕೇಜ್ರಿವಾಲ್‌, ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಕೇಜ್ರಿವಾಲ್‌ ಅವರನ್ನು ಸಿಬಿಐ ಜೂನ್‌ 26ರಂದು ಬಂಧಿಸಿತ್ತು. ಅವರ ಬಂಧನವನ್ನು ದೆಹಲಿ ಹೈಕೋರ್ಟ್‌ ಆಗಸ್ಟ್‌ 5ರಂದು ಎತ್ತಿಹಿಡಿದಿತ್ತು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.