ADVERTISEMENT

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಸಿಬಿಐ ಮೇಲ್ಮನವಿ

ಪಿಟಿಐ
Published 27 ಫೆಬ್ರುವರಿ 2026, 11:58 IST
Last Updated 27 ಫೆಬ್ರುವರಿ 2026, 11:58 IST
<div class="paragraphs"><p>ದೆಹಲಿ ಹೈಕೋರ್ಟ್ ಹಾಗೂ ಕೇಜ್ರಿವಾಲ್</p></div>

ದೆಹಲಿ ಹೈಕೋರ್ಟ್ ಹಾಗೂ ಕೇಜ್ರಿವಾಲ್

   

– ಪಿಟಿಐ ಚಿತ್ರಗಳು

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿ 21 ಮಂದಿಯನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ ಎ’ದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ADVERTISEMENT

ದೋಷಾರೋಪ ನಿಗದಿ ವೇಳೆ ಹಲವು ವಿಷಯಗಳನ್ನು ವಿಶೇಷ ನ್ಯಾಯಾಲಯ ಒಂದೋ ನಿರ್ಲಕ್ಷಿಸಿದೆ ಅಥವಾ ಪರಿಗಣಿಸಿಲ್ಲ. ಹೀಗಾಗಿ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಕೇಜ್ರಿವಾಲ್, ಸಿಸೋಡಿಯಾ ಸೇರಿ 21 ಮಂದಿ ವಿರುದ್ಧ ಸಿಐಡಿ ಸಲ್ಲಿಸಿದ್ದ ಚಾರ್ಜ್‌ಶೀಟ್ ಅನ್ನು ತಿರಸ್ಕರಿಸಿದ ನ್ಯಾಯಾಲಯ ಅವರೆಲ್ಲರನ್ನೂ ಖುಲಾಸೆಗೊಳಿಸಿದೆ.

ಖುಲಾಸೆಗೊಂಡವರಲ್ಲಿ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ಕೂಡ ಇದ್ದಾರೆ.

ಪ್ರಕರಣದಲ್ಲಿ ಸಿಬಿಐ ನಡೆಸಿದ ತನಿಖೆಯಲ್ಲಿ ಲೋಪಗಳಿವೆ. ಪ್ರಕರಣದಲ್ಲಿ ಕೇಜ್ರಿವಾಲ್ ಹಾಗೂ ಇತರರು ಭಾಗಿಯಾಗಿದ್ದಾರೆ ಎಂದು ಸಾಬೀತುಪಡಿಸುವ ಯಾವ ಅಂಶಗಳೂ ಮೇಲ್ನೋಟಕ್ಕೆ ಕಂಡು ಬಂದಿಲ್ಲ ಎಂದು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿತೇಂದ್ರ ಸಿಂಗ್ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.