ADVERTISEMENT

ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಪಿಟಿಐ
Published 21 ಮೇ 2024, 15:56 IST
Last Updated 21 ಮೇ 2024, 15:56 IST
ಮನೀಶ್‌ ಸಿಸೋಡಿಯಾ
ಮನೀಶ್‌ ಸಿಸೋಡಿಯಾ   

ನವದೆಹಲಿ (ಪಿಟಿಐ): ಎಎಪಿ ನಾಯಕ ಮನೀಶ್‌ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಿ ದೆಹಲಿ ಕೋರ್ಟ್ ಮಂಗಳವಾರ ಆದೇಶ ಪ್ರಕಟಿಸಿದೆ.

ವಿಶೇಷ ನ್ಯಾಯಾಧೀಶೆ ಕಾವೇರಿ ಬಾವೇಜಾ ಅವರು ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶಿಸಿದರು.

ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ಕಳೆದ ವರ್ಷ ಮಾರ್ಚ್‌ 9ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.