ADVERTISEMENT

ವೈಎಸ್‌ಆರ್‌ ಕಾಂಗ್ರೆಸ್‌ ಸಂಸದ ಪುತ್ರನ ಜಾಮೀನು ಅರ್ಜಿ ವಜಾ

ಅಬಕಾರಿ ನೀತಿ ಹಗರಣ

​ಪ್ರಜಾವಾಣಿ ವಾರ್ತೆ
Published 9 ಮೇ 2023, 14:08 IST
Last Updated 9 ಮೇ 2023, 14:08 IST
ಚೌತಾಲ ಜಾಮೀನು ಅರ್ಜಿ ವಜಾ
ಚೌತಾಲ ಜಾಮೀನು ಅರ್ಜಿ ವಜಾ   

ನವದೆಹಲಿ (ಪಿಟಿಐ): ಅಬಕಾರಿ ನೀತಿ ಹಗರಣದ ಜೊತೆ ನಂಟು ಹೊಂದಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಸಂಸದ ಮಾಗುಂಟ ಶ್ರೀನಿವಾಸುಲು ರೆಡ್ಡಿ ಅವರ ಪುತ್ರ ರಾಘವ ಮಾಗುಂಟ ಅವರು ಸಲ್ಲಿಸಿದ್ದ ಅರ್ಜಿಯನ್ನು ಇಲ್ಲಿನ ನ್ಯಾಯಾಲಯವು ವಜಾಗೊಳಿಸಿದೆ.

ಪತ್ನಿಯ ಅನಾರೋಗ್ಯದ ಕಾರಣ ಮಧ್ಯಂತರ ಜಾಮೀನು ನೀಡಬೇಕೆಂದು ಕೋರಿ ರಾಘವ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ನ್ಯಾಯಾಧೀಶ ಎಂ.ಕೆ. ನಾಗ್ಪಾಲ್‌ ಅವರು ವಜಾಗೊಳಿಸಿದ್ದಾರೆ.

ಗಂಭೀರ ಆರ್ಥಿಕ ಅಪರಾಧ ಪ್ರಕರಣದಲ್ಲಿ ಆರೋಪಿಯಾಗಿರುವುದರಿಂದ ರಾಘವ ಅವರಿಗೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ADVERTISEMENT

‘ಪತ್ನಿಯ ಅನಾರೋಗ್ಯಕ್ಕೆ ಸಂಬಂಧಿಸಿ ರಾಘವ ಅವರು ಸಲ್ಲಿಸಿರುವ ದಾಖಲೆಗಳನ್ನು ಪರಿಶೀಲಿಸಿದಾಗ, ಅದು ಗಂಭೀರವಾದ ಆರೋಗ್ಯ ಸಮಸ್ಯೆ ಅಲ್ಲ ಎಂಬುದು ತಿಳಿದು ಬಂದಿದೆ. ಕುಟುಂಬದ ಇತರ ಸದಸ್ಯರು ಆಕೆಯ ಆರೈಕೆ ಮಾಡಬೇಕು’ ಎಂದೂ ನ್ಯಾಯಾಲಯ ತಿಳಿಸಿದೆ.

ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾ ಅವರು ಕೂಡ ಈ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.