
ಮನೀಶ್ ಸಿಸೋಡಿಯಾ
ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ವಿಧಿಸಲಾಗಿರುವ ನ್ಯಾಯಾಂಗ ಬಂಧನದ ಅವಧಿಯನ್ನು ಮೇ 30ರವರೆಗೆ ವಿಸ್ತರಿಸುವಂತೆ ಇಲ್ಲಿನ ನ್ಯಾಯಾಲಯವು ಶನಿವಾರ ಆದೇಶಿಸಿದೆ.
ಪ್ರಕರಣದ ಕುರಿತು ವಿಚಾರಣೆ ನಡೆಸಿದ ಸಿಬಿಐ ಮತ್ತು ಇ.ಡಿಯ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು, ವಿಚಾರಣೆಯನ್ನು ಮೇ 30ಕ್ಕೆ ಮುಂದೂಡಿದ್ದಾರೆ.
ಜೈಲಿನಲ್ಲಿರುವ ಸಿಸೋಡಿಯಾ ಮತ್ತು ಇತರ ಆರೋಪಿಗಳು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಯಲ್ಲಿ ಭಾಗಿಯಾದರು.
ಜಾಮೀನು ಕೋರಿ ಈ ಹಿಂದೆ ಸಿಸೋಡಿಯಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತ್ತು. ದೆಹಲಿ: ಸ್ವಾತಿ ಮಾಲಿವಾಲ್ ಘಟನೆಗೆ ಖಂಡನೆ, ಕೇಜ್ರಿವಾಲ್ ನಿವಾಸದ ಎದುರು BJP ಪ್ರತಿಭಟನೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.