ಸಾಂದರ್ಭಿಕ ಚಿತ್ರ
ವಯನಾಡ್: ವಯನಾಡ್ ಜಿಲ್ಲೆಯಲ್ಲಿ ಸಶಸ್ತ್ರ ಮಾವೋವಾದಿಗಳು ಇದ್ದಾರೆ ಎಂಬ ವರದಿಗಳ ನಡುವೆಯೇ, ಜಿಲ್ಲೆಯ ಹಳ್ಳಿಯೊಂದರಲ್ಲಿ ಹುದುಗಿಸಿ ಇಟ್ಟಿದ್ದ ಸ್ಫೋಟಕ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಳಪ್ಪುಳ ಪೊಲೀಸ್ ಠಾಣಾ ವ್ಯಾಪ್ತಿಯ ಮಕ್ಕಿಮಾಲಾ ಪ್ರದೇಶದಲ್ಲಿ ಸ್ಫೋಟಕ ಪತ್ತೆಯಾಗಿದೆ. ಕೇರಳ ಪೊಲೀಸ್ ಇಲಾಖೆಯ ಥಂಡರ್‌ಬೋಲ್ಟ್ ಪಡೆಯು ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದಾಗ ಇದು ಪತ್ತೆಯಾಗಿದೆ. ಸ್ಫೋಟಕವನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.