ಪ್ರಾತಿನಿಧಿಕ ಚಿತ್ರ
ಮುಂಬೈ: ನಗರದ ಲೋಕಮಾನ್ಯ ತಿಲಕ್ ಟರ್ಮಿನಸ್‌ನಲ್ಲಿ (ಎಲ್‌ಟಿಟಿ) ಎಕ್ಸ್‌ಪ್ರೆಸ್ ರೈಲಿನ ಶೌಚಾಲಯದೊಳಗೆ ಇರಿಸಲಾಗಿದ್ದ ಕಸದ ಬುಟ್ಟಿಯಲ್ಲಿ ನಾಲ್ಕು ವರ್ಷದ ಬಾಲಕನ ಶವ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಗೋರಖ್‌ಪುರ ಮತ್ತು ಮುಂಬೈ ನಡುವೆ ಪ್ರತಿದಿನ ಸಂಚರಿಸುವ ಕುಶಿನಗರ ಎಕ್ಸ್‌ಪ್ರೆಸ್ ರೈಲಿನ (22537) ಹವಾನಿಯಂತ್ರಿತ ಕೋಚ್‌ನಲ್ಲಿ ಶವ ಪತ್ತೆಯಾಗಿದೆ.
‘ಬೆಳಿಗ್ಗೆ 6 ಗಂಟೆಗೆ ರೈಲಿನ ಬಿ2 ಕೋಚ್‌ನ ಶೌಚಾಲಯದಲ್ಲಿ ಬಾಲಕನ ಶವ ಪತ್ತೆಯಾಗಿರುವ ಬಗ್ಗೆ ಸ್ವಚ್ಛತಾ ಸಿಬ್ಬಂದಿ ಮಾಹಿತಿ ನೀಡಿದರು’ ಎಂದು ಕೇಂದ್ರ ರೈಲ್ವೆಯ ಸಾರ್ವಜನಿಕ ಸಂಪರ್ಕ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಪ್ರಕರಣ ಸಂಬಂಧ ರೈಲ್ವೆ ಭದ್ರತಾ ಪಡೆ (ಆರ್‌ಪಿಎಫ್) ತನಿಖೆ ನಡೆಸುತ್ತಿದೆ ಎಂದೂ ಅವರು ಹೇಳಿದ್ದಾರೆ.
ಕುಶಿನಗರ ಎಕ್ಸ್‌ಪ್ರೆಸ್ ಮುಂಬೈನಿಂದ ಉತ್ತರ ಭಾರತವನ್ನು ಸಂಪರ್ಕಿಸುವ ಜನಪ್ರಿಯ ರೈಲುಗಳಲ್ಲಿ ಒಂದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.