ADVERTISEMENT

ಆಂಧ್ರಕ್ಕೆ ಕೇಂದ್ರ ಹಣಕಾಸಿನ ನೆರವು ನೀಡಲಿ: ಮುಖ್ಯ ನ್ಯಾಯಮೂರ್ತಿ ರಮಣ

ಪಿಟಿಐ
Published 20 ಆಗಸ್ಟ್ 2022, 16:05 IST
Last Updated 20 ಆಗಸ್ಟ್ 2022, 16:05 IST
ಗುಂಟೂರಿನ ಮಂಗಳಗಿರಿಯಲ್ಲಿ ನಡೆದ ಕಾರ್ಯಕ್ರಮದ ವೇಳೆ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್‌.ಜಗನ್‌ಮೋಹನ್‌ ರೆಡ್ಡಿ ಅವರು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ರಾಜ್ಯಪಾಲ ವಿಶ್ವಭೂಷಣ್‌ ಹರಿಚಂದನ್‌ ಇದ್ದರು–ಪಿಟಿಐ ಚಿತ್ರ  

ಅಮರಾವತಿ: ‘ಇಬ್ಭಾಗದ ನಂತರ ಆಂಧ್ರಪ್ರದೇಶವು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಕೇಂದ್ರ ಸರ್ಕಾರವು ಈ ರಾಜ್ಯಕ್ಕೆ ಹೆಚ್ಚಿನ ಹಣಕಾಸಿನ ನೆರವು ಒದಗಿಸಬೇಕು’ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಶನಿವಾರ ಹೇಳಿದ್ದಾರೆ.

ವಿಜಯವಾಡದಲ್ಲಿ ನ್ಯಾಯಾಲಯ ಸಂಕೀರ್ಣ ಉದ್ಘಾಟಿಸಿ ಮಾತನಾಡಿದ ಅವರು,‘ಆಂಧ್ರ ಹಾಗೂ ತೆಲಂಗಾಣ ಇಬ್ಭಾಗವಾದ ಬಳಿಕ ಆಂಧ್ರವು ಆರ್ಥಿಕವಾಗಿ ಹಿಂದುಳಿದಿದೆ ಎಂಬ ಭಾವನೆ ಸ್ಥಳೀಯರಲ್ಲಿದೆ. ಹೀಗಾಗಿ ಕೇಂದ್ರವು ನೆರವು ಪ್ರಕಟಿಸಬೇಕು’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT