ಮುಂಬೈ: ಮುಂಬೈನ ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಸೇವನೆ ಪ್ರಕರಣದಿಂದ ಆರ್ಯನ್ ಖಾನ್ ಕೈಬಿಡಲು ಎನ್‌ಸಿಬಿ ಅಧಿಕಾರಿಗಳು ₹25 ಕೋಟಿಗೆ ಬೇಡಿಕೆ ಇರಿಸಿದ್ದಾಗಿ ಆರೋಪಿಸಿದ್ದ ಸ್ವತಂತ್ರ ಸಾಕ್ಷಿದಾರ ಪ್ರಭಾಕರ ಸೈಲ್ ಅವರಿಂದ ಮುಂಬೈ ಪೊಲೀಸರು ಎಂಟು ಗಂಟೆಗಳ ಕಾಲ ಹೇಳಿಕೆ ದಾಖಲಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಮಂಗಳವಾರ ಸಂಜೆಪ್ರಭಾಕರ್ ಅವರು ನಗರ ಪೊಲೀಸರ ಮುಂದೆ ಹಾಜರಾಗಿದ್ದರು. ಅವರಿಂದ ರಾತ್ರಿಯಿಂದಲೇ ಪೊಲೀಸರು ಹೇಳಿಕೆ ದಾಖಲಿಸುವ ಪ್ರಕ್ರಿಯೆ ಆರಂಭಿಸಿದ್ದು, ಬುಧವಾರ ಮುಂಜಾನೆ 3 ಗಂಟೆ ಸುಮಾರಿಗೆ ಪೂರ್ಣಗೊಂಡಿತು ಎಂದು ಅವರು ಹೇಳಿದರು.‘
ಹೇಳಿಕೆ ನೀಡಿದ ನಂತರ ಸೈಲ್ ಅವರು, ಬುಧವಾರ ಮುಂಜಾನೆ ಅಜಾದ್ ಮೈದಾನದಲ್ಲಿರುವ ಸಹಾಯ ಪೊಲೀಸ್ ಅಯುಕ್ತರ ಕಚೇರಿಗೆ ತೆರಳಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಿಟಿ ಪೊಲೀಸರು ಅವರಿಗೆ ಬಿಗಿ ಭದ್ರತೆ ಒದಗಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.