ADVERTISEMENT

ವಲಸೆ ಕಾರ್ಮಿಕರ ಮೇಲೆ ಹರಿದ ರೈಲು| ಪ್ರಧಾನಿ ತೀವ್ರ ಬೇಸರ, ಅಗತ್ಯ ನೆರವಿನ ಭರವಸೆ

​ಪ್ರಜಾವಾಣಿ ವಾರ್ತೆ
Published 8 ಮೇ 2020, 4:16 IST
Last Updated 8 ಮೇ 2020, 4:16 IST
ಪ್ರಧಾನಮಂತ್ರಿ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ    

ನವದೆಹಲಿ/ಮುಂಬೈ: ಮಹಾರಾಷ್ಟ್ರದ ಔರಂಗಬಾದ್‌ನಲ್ಲಿ ನಡೆದ ರೈಲು ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಅಗತ್ಯವಿರುವ ಎಲ್ಲ ಸಹಾಯವನ್ನೂ ಒದಗಿಸಲಾಗುವುದು,’ ಎಂದು ಹೇಳಿದ್ದಾರೆ.

ADVERTISEMENT

‘ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ನಡೆದ ರೈಲು ಅಪಘಾತದಲ್ಲಿ ವಲಸೆ ಕಾರ್ಮಿಕರ ಪ್ರಾಣಹಾನಿಯಾಗಿದ್ದು ತೀವ್ರ ಸಂಕಟ ತರಿಸಿದೆ. ಘಟನೆ ಬಗ್ಗೆ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಮಾತನಾಡಿದ್ದೇನೆ. ಅವರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅಗತ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ,’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ದುರಂತಕ್ಕೆ ವಿಷಾದ ವ್ಯಕ್ತಪಡಿಸಿರುವ ರೈಲ್ವೆ ಸಚಿವ ಪಿಯೂಷ್‌ ಗೋಯಲ್‌, ‘ಪರಿಹಾರ ಕಾರ್ಯಗಳು ನಡೆಯುತ್ತಿವೆ. ಘಟನೆಯ ವಿಚಾರಣೆಗೆ ಆದೇಶ ನೀಡಲಾಗಿದೆ. ಅಗಲಿದ ಆತ್ಮಗಳ ಶಾಂತಿಗಾಗಿ ನಾನು ದೇವರನ್ನು ಪ್ರಾರ್ಥಿಸುತ್ತೇನೆ,’ ಎಂದು ಟ್ವೀಟ್‌ ಮಾಡಿದ್ದಾರೆ.

ಮಹಾರಾಷ್ಟ್ರದ ಔರಂಗಬಾದ್‌ ನಗರದ ರೈಲು ಹಳಿಯಲ್ಲಿ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಸರಕು ಸಾಗಾಣೆ ರೈಲು ಹರಿದು 14 ಮಂದಿ ಸಾವಿಗೀಡಾದ ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. 5 ಮಂದಿಗೆ ಗಾಯಗಳಾಗಿದ್ದು ಅವರನ್ನು ಔರಂಗಾಬಾದ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದಕ್ಷಿಣ ಸೆಂಟ್ರಲ್ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಹೇಳಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ ಜಲ್ನಾ - ಔರಂಗಬಾದ್ ನಡುವೆ ಪ್ರಯಾಣಿಸಿದ ಗೂಡ್ಸ್ ರೈಲು, ಹಳಿಯಲ್ಲಿ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಹಾದುಹೋಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.