ADVERTISEMENT

ಉತ್ತರ ಪ್ರದೇಶ: ಅಧಿಕಾರಕ್ಕೇರಿದರೆ ಮಹಿಳೆಯರಿಗೆ ಶೇ 40ರಷ್ಟು ಮೀಸಲಾತಿ -ಪ್ರಿಯಾಂಕಾ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2021, 12:24 IST
Last Updated 8 ಡಿಸೆಂಬರ್ 2021, 12:24 IST
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಲಖನೌನಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಚುನಾವಣಾ ‍ಪ್ರಣಾಳಿಕೆ ಬಿಡುಗಡೆ ಮಾಡಿದರು. –ಪಿಟಿಐ ಚಿತ್ರ
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಲಖನೌನಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಚುನಾವಣಾ ‍ಪ್ರಣಾಳಿಕೆ ಬಿಡುಗಡೆ ಮಾಡಿದರು. –ಪಿಟಿಐ ಚಿತ್ರ    

ಲಖನೌ: ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ, ಸರ್ಕಾರಿ ಕೆಲಸಗಳಲ್ಲಿ ಮಹಿಳೆಯರಿಗೆ ಶೇಕಡ 40 ರಷ್ಟು ಮೀಸಲಾತಿ ನೀಡುವುದಾಗಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭರವಸೆ ನೀಡಿದ್ದಾರೆ.

ಇಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಚುನಾವಣಾ ಪ್ರಣಾಳಿಕೆ ‘ಶಕ್ತಿ ವಿಧಾನ್‌’ ಅನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ರಾಜ್ಯದ ಪ್ರತಿಯೊಂದು ಪೊಲೀಸ್‌ ಠಾಣೆಗಳಲ್ಲಿ ಮಹಿಳಾ ಕಾನ್‌ಸ್ಟೇಬಲ್‌ಗಳನ್ನು ನಿಯೋಜಿಸಲಾಗುವುದು’ ಎಂದು ಅವರು ಹೇಳಿದರು.

‘ಕಾಂಗ್ರೆಸ್‌ ಪಕ್ಷವು ದೇಶಕ್ಕೆ ತನ್ನ ಮೊದಲ ಮಹಿಳಾ ಪ್ರಧಾನ ಮಂತ್ರಿಯನ್ನು ನೀಡಿತು. ರಾಜಕೀಯದಲ್ಲಿ ಮಹಿಳೆಯರ ಪಾಲ್ಗೊಳುವಿಕೆ ಹೆಚ್ಚಬೇಕೆಂದು ನಾವು ಬಯಸುತ್ತೇವೆ. ಮಹಿಳೆಯರಿಗೆ ಕಾನೂನಾತ್ಮಕ ನೆರವು ಒದಗಿಸಲು ಪ್ರತಿಯೊಂದು ಜಿಲ್ಲೆಯಲ್ಲೂ ಮೂರು ಸದಸ್ಯರ ತಂಡವನ್ನು ನೇಮಿಸಲಾಗುವುದು. ಅಲ್ಲದೆ, ಸರ್ಕಾರಿ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

ಇದೇ ವೇಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಯೋಗಿ ಆದಿತ್ಯನಾಥ್‌ ಅವರಿಂದ ನಾನು ನನ್ನ ಧರ್ಮದ ಬಗ್ಗೆ ಪ್ರಮಾಣ ಪತ್ರ ಪಡೆಯಬೇಕೆಂಬ ಅವಶ್ಯಕತೆ ಇಲ್ಲ’ ಎಂದರು.

‘ಯೋಗಿ ಅವರಿಗೆ ಗೊತ್ತಿದೆಯಾ ನಾನು ಯಾವ ದೇವಸ್ಥಾನಕ್ಕೆ ಹೋಗುತ್ತೇನೆ. ಯಾವಾಗಿನಿಂದ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದೇನೆಂದು? ಅವರಿಗೆ ನನ್ನ ಬಗ್ಗೆ ಏನು ತಿಳಿದಿದೆ. ಅವರು ನನಗೆ ಪ್ರಮಾಣಪತ್ರ ಕೊಡಬೇಕಾ?’ ಎಂದು ಕುಟುಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.