ADVERTISEMENT

ಪ್ರಧಾನಿ ವೈಫಲ್ಯದಿಂದಾಗಿ ಮತ್ತೊಮ್ಮೆ ಲಾಕ್‌ಡೌನ್‌ನತ್ತ ದೇಶ: ರಾಹುಲ್‌ ಟೀಕೆ

ಪಿಟಿಐ
Published 6 ಮೇ 2021, 16:22 IST
Last Updated 6 ಮೇ 2021, 16:22 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   

ನವದೆಹಲಿ: ಕೋವಿಡ್‌–19 ನಿರ್ವಹಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವೈಫಲ್ಯ, ಪಿಡುಗು ಪ್ರಸರಣ ತಡೆಯುವಲ್ಲಿ ಸಮರ್ಪಕ ಕಾರ್ಯತಂತ್ರದಿಂದಾಗಿ ದೇಶ ಮತ್ತೊಮ್ಮೆ ಸಂಪೂರ್ಣ ಲಾಕ್‌ಡೌನ್‌ನತ್ತ ಸಾಗುವಂತಾಗಿದೆ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಟೀಕಿಸಿದ್ದಾರೆ.

‘ಕಳೆದ ವರ್ಷ ಯಾವುದೇ ತಯಾರಿ ಇಲ್ಲದೇ ಲಾಕ್‌ಡೌನ್‌ ವಿಧಿಸಿದ ಕಾರಣ ಜನರು ತತ್ತರಿ ಹೋದರು. ಹೀಗಾಗಿ ಮತ್ತೊಮ್ಮೆ ಸಂಪೂರ್ಣ ಲಾಕ್‌ಡೌನ್‌ ಜಾರಿಗೊಳಿಸುವುದನ್ನು ನಾನು ವಿರೋಧಿಸುತ್ತೇನೆ’ ಎಂದ ಅವರು, ‘ಬಡ ಜನರಿಗಾಗಿ ಸೂಕ್ತ ಪ್ಯಾಕೇಜ್‌ ಘೋಷಣೆ ಮಾಡಬೇಕು’ ಎಂದು ಒತ್ತಾಯಿಸಿದರು.

‘ಐದು ರಾಜ್ಯಗಳಲ್ಲಿ ಚುನಾವಣೆಗಳು ಮುಗಿದಿವು. ಹೀಗಾಗಿ ಈಗ ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳನ್ನು ಹೆಚ್ಚಿಸಲಾಗುತ್ತಿದೆ. ಈಗ ಕೇಂದ್ರ ಸರ್ಕಾರ ಲೂಟಿ ಆರಂಭಿಸಿದೆ’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.