ADVERTISEMENT

ಫೈಜಾಬಾದ್‌ ಜಿಲ್ಲೆಗೆ ಅಯೋಧ್ಯೆ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ

ಏಜೆನ್ಸೀಸ್
Published 7 ನವೆಂಬರ್ 2018, 11:23 IST
Last Updated 7 ನವೆಂಬರ್ 2018, 11:23 IST
ಮಂಗಳವಾರ ದೀಪಾವಳಿಯ ಪ್ರಯುಕ್ತ ಉತ್ತರ ಪ್ರದೇಶದ ಪುಣ್ಯಕ್ಷೇತ್ರ ಅಯೋಧ್ಯೆಯಲ್ಲಿ ಮೂರು ಲಕ್ಷ ಹಣತೆಗಳನ್ನು ಬೆಳಗುವ ಮೂಲಕ ನೂತನ ವಿಶ್ವ ದಾಖಲೆ ನಿರ್ಮಿಸಲಾಯಿತು.
ಮಂಗಳವಾರ ದೀಪಾವಳಿಯ ಪ್ರಯುಕ್ತ ಉತ್ತರ ಪ್ರದೇಶದ ಪುಣ್ಯಕ್ಷೇತ್ರ ಅಯೋಧ್ಯೆಯಲ್ಲಿ ಮೂರು ಲಕ್ಷ ಹಣತೆಗಳನ್ನು ಬೆಳಗುವ ಮೂಲಕ ನೂತನ ವಿಶ್ವ ದಾಖಲೆ ನಿರ್ಮಿಸಲಾಯಿತು.   

ಅಯೋಧ್ಯೆ: ಅಲಹಾಬಾದ್‌ ಅನ್ನು ಪ್ರಯಾಗ್‌ರಾಜ್ ಎಂದು ಮರುನಾಮಕರಣ ಮಾಡಿರುವ ಉತ್ತರ ಪ್ರದೇಶ ಸರ್ಕಾರವೀಗ ಫೈಜಾಬಾದ್‌ ಜಿಲ್ಲೆಯ ಹೆಸರನ್ನು ಅಯೋಧ್ಯೆ ಎಂದು ಬದಲಿಸುವುದಾಗಿ ಘೋಷಿಸಿದೆ.

‘ಅಯೋಧ್ಯೆ ನಮ್ಮ ಗೌರವ, ಹೆಮ್ಮೆ, ಪ್ರತಿಷ್ಠೆಯ ಸಂಕೇತ. ಅಯೋಧ್ಯೆಗೆ ಯಾರೂ ಅನ್ಯಾಯ ಮಾಡಲು ಸಾಧ್ಯವಿಲ್ಲ. ಈ ಪವಿತ್ರ ನಗರ ಭಗವಾನ್‌ ರಾಮನ ಜತೆಗೆ ಗುರುತಿಸಿಕೊಂಡಿದೆ’ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ.

ಮಂಗಳವಾರ ಇಲ್ಲಿನ ರಾಮಕಥಾ ಉದ್ಯಾನದಲ್ಲಿ ಆಯೋಜಿಸಿದ್ದ ಭವ್ಯ ದೀಪೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ದೀಪೋತ್ಸವ ಹೊಸ ಸಂಪ್ರದಾಯ ಆರಂಭಿಸುವ ಸಂದರ್ಭ. ಅಯೋಧ್ಯೆಯಲ್ಲಿ ರಾಮನ ಹೆಸರಿನಲ್ಲಿ ಹೊಸ ವಿಮಾನ ನಿಲ್ದಾಣ ಹಾಗೂ ರಾಜ ದಶರಥನ ಹೆಸರಿನಲ್ಲಿ ವೈದ್ಯಕೀಯ ಕಾಲೇಜ್ ನಿರ್ಮಿಸಲಾಗುವುದು’ ಎಂದು ಘೋಷಿಸಿದ್ದಾರೆ.

ADVERTISEMENT

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.