ಬಿಜೆಪಿ
ಪಟ್ನಾ: ಪಕ್ಷದ ನಕಲಿ ವೆಬ್‌ಸೈಟ್ ರಚನೆ ಮಾಡಲಾಗಿದ್ದು ಅದರಲ್ಲಿ ಸ್ಥಳೀಯ ನಾಯಕರನ್ನು ದೂಷಣೆಮಾಡಲಾಗುತ್ತಿದೆ ಎಂದು ಬಿಹಾರ ಬಿಜೆಪಿ ಘಟಕ ದೂರು ನೀಡಿದೆ.
ಇಲ್ಲಿನ ಸೈಬರ್ ಸೆಲ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.
ಕೆಲ ಕಿಡಿಗೇಡಿಗಳು ಬಿಹಾರ ಬಿಜೆಪಿ ಹೆಸರನ್ನು ಬಳಸಿಕೊಂಡು ನಕಲಿ ವೆಬ್‌ಸೈಟ್ ರಚಿಸಿದ್ದಾರೆ. ಇದರಲ್ಲಿ ಪಕ್ಷದ ನಾಯಕರನ್ನು ದೂಷಿಸಿ ಪೋಸ್ಟ್ ಮಾಡುತ್ತಿದ್ದಾರೆ ಎಂದು ಬಿಜೆಪಿಯ ರಾಜ್ಯ ಮಾಧ್ಯಮ ಉಸ್ತುವಾರಿ ಡ್ಯಾನಿಶ್ ಇಕ್ಬಾಲ್ ತಿಳಿಸಿದ್ದಾರೆ.
ಇದು ಗಂಭೀರ ಅಪರಾಧವಾಗಿದ್ದು ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಪೊಲೀಸರನ್ನು ಒತ್ತಾಯಿಸಿದ್ದಾರೆ.
ಆದಾಗ್ಯೂ, ಪೊಲೀಸರು ಪ್ರತಿಕ್ರಿಯೆಗೆ ಲಭ್ಯವಿರಲಿಲ್ಲ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.