ADVERTISEMENT

ಬಹರೇನ್‌– ಹೈದರಾಬಾದ್ ವಿಮಾನಕ್ಕೆ ಹುಸಿ ಬಾಂಬ್‌ ಬೆದರಿಕೆ

ಪಿಟಿಐ
Published 23 ನವೆಂಬರ್ 2025, 14:50 IST
Last Updated 23 ನವೆಂಬರ್ 2025, 14:50 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಹೈದರಾಬಾದ್‌: ಬಹರೇನ್‌ನಿಂದ ಹೈದರಾಬಾದ್‌ಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್‌ ಇರಿಸಲಾಗಿದೆ ಎಂದು ಇಲ್ಲಿನ ರಾಜೀವ್‌ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಇ–ಮೇಲ್‌ ಕಳುಹಿಸಲಾಗಿದೆ.

ಬ‌ಳಿಕ ವಿಮಾನವನ್ನು ಮುಂಬೈನಲ್ಲಿ ಸುರಕ್ಷಿತವಾಗಿ ಕೆಳಕ್ಕಿಳಿಸಿ, ಭದ್ರತಾ ತಪಾಸಣೆ ನಡೆಸಲಾಯಿತು. ಈ ವೇಳೆ ಯಾವುದೇ ಅನುಮಾನಾಸ್ಪದ ವಸ್ತು ವಿಮಾನದಲ್ಲಿ ಕಂಡು ಬಂದಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್‌ ಬೆದರಿಕೆ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದರು. 

ವಿಮಾನ ನಿಲ್ದಾಣದ ಅಧಿಕಾರಿಗಳು ದೂರು ದಾಖಲಿಸಿದ್ದು, ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.